ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಇಬ್ಬರು ಉಗ್ರರ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚಿಲ್ ಸೆಕ್ಟರ್'ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

ಕುಪ್ವಾರ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚಿಲ್ ಸೆಕ್ಟರ್'ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಭಾರತೀಯ ಸೇನೆ, ಬಿಎಸ್‌ಎಫ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಕುಪ್ವಾರದ ಮಚಿಲ್ ಸೆಕ್ಟರ್‌ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ದಿಟ್ಟ ಉತ್ತರ ನೀಡಿದ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇಬ್ಬರು ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಎಂದು ಎಡಿಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


