ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 13ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಠ 12 ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಠ 12 ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ 12 ಮಂದಿ ಸಾವನ್ನಪ್ಪಿದ್ದು, ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಪೊಲೀಸರು ತಿಳಿಸಿದ್ದಾರೆ.
ಭೂ ಕುಸಿತದಿಂದ ಸುಮಾರು 48 ಕುಟುಂಬಗಳಿಗೆ ಹಾನಿಯಾಗಿದೆ ಎನ್ನಲಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮಹಾರಾಷ್ಟ್ರ ಸರ್ಕಾರ ಭರಿಸಲಿದೆ ಎಂದೂ ಅವರು ಹೇಳಿದ್ದಾರೆ.
ಈ ಮಧ್ಯೆ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿದ್ದಾರೆ. ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಕೂಡಾ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


