ದೇಶ

ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ ಮುಖಾಮುಖಿ; ಕೆಲಕಾಲ ಮಾತುಕತೆ

ಮುಂಗಾರು ಅಧಿವೇಶನದ ಮೊದಲ ದಿನವಾದ ಗುರುವಾರ ಲೋಕಸಭೆಯ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮುಖಾಮುಖಿಯಾದರು. ಈ ವೇಳೆ ಅವರು ಕೆಲಕಾಲ ಮಾತುಕತೆ ನಡೆಸಿದರು.

ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ ಮುಖಾಮುಖಿ; ಕೆಲಕಾಲ ಮಾತುಕತೆ
ಸೋನಿಯಾ ಗಾಂಧಿ - ನರೇಂದ್ರ ಮೋದಿ
Published On :

ನವದೆಹಲಿ: ಮುಂಗಾರು ಅಧಿವೇಶನದ ಮೊದಲ ದಿನವಾದ ಗುರುವಾರ ಲೋಕಸಭೆಯ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮುಖಾಮುಖಿಯಾದರು. ಈ ವೇಳೆ ಅವರು ಕೆಲಕಾಲ ಮಾತುಕತೆ ನಡೆಸಿದರು.

ಅಧಿವೇಶನದ ಮೊದಲ ದಿನ ಸದನಕ್ಕೆ ಆಗಮಿಸಿದ ಮೋದಿ ಅವರು, ಕಲಾಪ ಆರಂಭವಾಗುವ ಮುನ್ನವೇ ವಿವಿಧ ನಾಯಕರಿಗೆ ಶುಭಾಶಯ ಕೋರಿದರು.

ಈ ವೇಳೆ ಪ್ರತಿಪಕ್ಷ ನಾಯಕರ ಸ್ಥಾನಕ್ಕೆ ತಲುಪಿದ ಅವರು, ಸೋನಿಯಾ ಗಾಂಧಿಯವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ಸಂಸತ್ ಅಧಿವೇಶನದ ಮೊದಲ ದಿನ ನಾಯಕರು ಪರಸ್ಪರ ಶುಭಾಶಯ ಕೋರುವುದು ವಾಡಿಕೆ.

ಇದಕ್ಕೂ ಮುನ್ನ ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಯು 140 ಕೋಟಿ ಭಾರತೀಯರು ನಾಚಿಕೆ ಪಡುವಂತದ್ದು. ಕಾನೂನು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಮತ್ತು ಘಟನೆಯಲ್ಲಿನ ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದರು. 

ಈಶಾನ್ಯ ರಾಜ್ಯದಲ್ಲಿನ ಜನಾಂಗೀಯ ಹಿಂಸಾಚಾರದ ಪ್ರಧಾನಿ ಮೋದಿ ಮಾತನಾಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಟೀಕೆಗಳ ನಡುವೆಯೇ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ, 'ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ' ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.