ದೇಶ

ಮಣಿಪುರ ಹಿಂಸಾಚಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಕ್ಕೆ ಜಾರ್ಖಾಂಡ್ ಸಿಎಂ ಆಗ್ರಹ

ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮಧ್ಯಪ್ರವೇಶಿಸಿ ಈಶಾನ್ಯ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಾರ್ಖಾಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಆಗ್ರಹಿಸಿದ್ದಾರೆ.

ಮಣಿಪುರ ಹಿಂಸಾಚಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಕ್ಕೆ ಜಾರ್ಖಾಂಡ್ ಸಿಎಂ ಆಗ್ರಹ
ಜಾರ್ಖಾಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್
Published On :

ರಾಂಚಿ: ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮಧ್ಯಪ್ರವೇಶಿಸಿ ಈಶಾನ್ಯ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಾರ್ಖಾಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಆಗ್ರಹಿಸಿದ್ದಾರೆ.

ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವ ಜಾರ್ಖಾಂಡ್ ಸಿಎಂ, ಮಣಿಪುರದಲ್ಲಿ ಬುಡಕಟ್ಟು ಜನಾಂಗದವರನ್ನು 'ಅನಾಗರಿಕ ರೀತಿಯಲ್ಲಿ' ನಡೆಸಿಕೊಳ್ಳಲು ಬಿಡಲು ಸಾಧ್ಯವಿಲ್ಲ. ಈಶಾನ್ಯ ರಾಜ್ಯದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಘಟನೆ ಬಳಿಕ ಬಹಳ ದುಃಖದಿಂದ ಪತ್ರ ಬರೆಯುತ್ತಿದ್ದಾರೆ. ಕ್ರೌರ್ಯದ ಎದುರು ಮೌನವಾಗಿರುವುದು ಭಯಾನಕ ಅಪರಾಧ ಮತ್ತು ಆದ್ದರಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭಾರವಾದ ಹೃದಯ ಮತ್ತು ದುಃಖದಿಂದ ನಿಮಗೆ ಪತ್ರ ಬರೆಯುತ್ತಿದ್ದೇನೆ. ಮಣಿಪುರ ಪರಿಸ್ಥಿತಿ ಬಹಳ ಕಳವಳವನ್ನುಂಟು ಮಾಡುತ್ತಿದೆ.

ಕಳೆದ ಎರಡು ತಿಂಗಳುಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ, ಹೃದಯ ವಿದ್ರಾವಕ ವೀಡಿಯೊಗಳು ಹೊರಬರುತ್ತಿವೆ. ಮಣಿಪುರದ ಜನತೆಗೆ ನ್ಯಾಯ ದೊರಕಿಸಿಕೊಡಬೇಕು. ಅಲ್ಲಿ ಶಾಂತಿಯನ್ನು ಮರುಸ್ಥಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಮಣಿಪುರದ ಇಂಫಾಲದಲ್ಲಿ ನೆಲೆಸಿರುವ ಬಹುಸಂಖ್ಯಾತ ಮೈತೇಯಿ ಸಮುದಾಯ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ನೆಲೆಸಿರುವ ಬುಡಕಟ್ಟು ಕುಕಿಗಳ ನಡುವೆ ಮೇ 3 ರಿಂದ ಜನಾಂಗೀಯ ಘರ್ಷಣೆ ನಡೆಯುತ್ತಲೇ ಇದೆ. ಈ ಘರ್ಷಣೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಈ ವರೆಗೂ 160 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.