ಉತ್ತರ ಪ್ರದೇಶ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಟ್ರಕ್, ಮೂವರು ಸಾವು
ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಮನೆಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು...

ಪ್ರತಾಪಗಢ: ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಮನೆಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಲಖನೌ-ವಾರಣಾಸಿ ಹೆದ್ದಾರಿಯ ಸರಾಯ್ ಬಹೇಲಿಯಾ ಗ್ರಾಮದ ಮನೆಯೊಂದರಲ್ಲಿ ಕುಟುಂಬದ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮೃತರನ್ನು ಮನೆ ಮಾಲೀಕ ಅಬ್ದುಲ್ ಜಬ್ಬಾರ್(60), ಅವರ ಮಗಳು ಶಾಹೀನ್ ಬಾನೋ (27) ಮತ್ತು ಸೊಸೆ ಸಫಿಯಾ ಬಾನೊ(62) ಮನೆಯ ವರಾಂಡಾದಲ್ಲಿ ಕುಳಿತಿದ್ದಾಗ ವೇಗವಾಗಿ ಬಂದ ಟ್ರಕ್, ಚಾಲಕನ ನಿಯಂತ್ರ ತಪ್ಪಿ ಅವರ ಮನೆಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ರಾಮಸ್ಥರಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈ ಮೂವರನ್ನು ಇಲ್ಲಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿರುವುದಾಗಿ ಅಧಿಕಾರಿ ಹೇಳಿದ್ದಾರೆ.
ಘಟನೆಯ ನಂತರ ಪರಾರಿಯಾಗಿರುವ ಚಾಲಕನನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ. ನಂತರ ಟ್ರಕ್ ಅನ್ನು ಕ್ರೇನ್ ಬಳಸಿ ಠಾಣೆಗೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


