ದೇಶ

ಜಾರ್ಖಂಡ್: ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಮಾಡಿ, ಆನ್‌ಲೈನ್‌ನಲ್ಲಿ ಶೇರ್ ಮಾಡಿದ್ದ ಶಿಕ್ಷಕನ ಬಂಧನ

9ನೇ ತರಗತಿ ವಿದ್ಯಾರ್ಥಿಯ ಅಶ್ಲೀಲ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ 28 ವರ್ಷದ ಶಿಕ್ಷಕನನ್ನು ಸೋಮವಾರ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು...

ಜಾರ್ಖಂಡ್: ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಮಾಡಿ, ಆನ್‌ಲೈನ್‌ನಲ್ಲಿ ಶೇರ್ ಮಾಡಿದ್ದ ಶಿಕ್ಷಕನ ಬಂಧನ
ಸಾಂದರ್ಭಿಕ ಚಿತ್ರ
Published On :

ಧನ್ಬಾದ್: 9ನೇ ತರಗತಿ ವಿದ್ಯಾರ್ಥಿಯ ಅಶ್ಲೀಲ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ 28 ವರ್ಷದ ಶಿಕ್ಷಕನನ್ನು ಸೋಮವಾರ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತರಗತಿಯ ನಂತರ ತನ್ನ ಕೋಚಿಂಗ್ ಸೆಂಟರ್‌ಗೆ ಕರೆಯಿಸಿಕೊಳ್ಳುತ್ತಿದ್ದ ಶಿಕ್ಷಕ, ವಿದ್ಯಾರ್ಥಿನಿಯೊಂದಿಗೆ 'ಆಕ್ಷೇಪಾರ್ಹ ಚಟುವಟಿಕೆಗಳಲ್ಲಿ' ತೊಡಗುತ್ತಿದ್ದನು ಮತ್ತು ಅದನ್ನು ವಿಡಿಯೋ ಮಾಡಿ, ಅವುಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕುವ ಮೂಲಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

ಭಾನುವಾರ, ಶಿಕ್ಷಕ ಆ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.

ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

ಬಾಲಕಿ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಧನ್ಸಾರ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ರಾಜದೇವ್ ಸಿಂಗ್ ಹೇಳಿದ್ದಾರೆ.

ವಿದ್ಯಾರ್ಥಿನಿ ಕಳೆದ ಒಂದು ವರ್ಷದಿಂದ ಕೋಚಿಂಗ್ ಸೆಂಟರ್‌ಗೆ ಹೋಗುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.