ದೇಶ

ಲೋಕಸಭೆ: ಮಣಿಪುರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಗದ್ದಲ, ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ನಡೆಯಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಸಹ ಪ್ರತಿಭಟನೆ, ಗದ್ದಲವನ್ನು ಮುಂದುವರೆಸಿದ್ದರಿಂದ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

ಲೋಕಸಭೆ: ಮಣಿಪುರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಗದ್ದಲ, ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಲೋಕಸಭೆ ಸ್ಪೀಕರ್ ಓಂ ಬಿರ್ಲಾ
Published On :

ನವದೆಹಲಿ: ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ನಡೆಯಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಸಹ ಪ್ರತಿಭಟನೆ, ಗದ್ದಲವನ್ನು ಮುಂದುವರೆಸಿದ್ದರಿಂದ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

ಪ್ರಶ್ನೋತ್ತರ ಅವಧಿ ಆರಂಭವಾಗುತ್ತಿದ್ದಂತೆಯೇ ವಿಪಕ್ಷಗಳು ಪ್ರತಿಭಟನೆಯನ್ನು ಆರಂಭಿಸಿದವು. ಪ್ರತಿಭಟನಾನಿರತ ಸದಸ್ಯರು ತಮ್ಮ ಆಸನಗಳಿಗೆ ಮರಳಿ, ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದರು.  ಭಿತ್ತಿ ಪತ್ರ ಪ್ರದರ್ಶನ ಹಾಗೂ ಘೋಷಣೆ ಕೂಗುವುದರಿಂದ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ, ಸದನದ ಘನತೆ ಕಾಪಾಡುವಂತೆ ಸ್ಪೀಕರ್ ಹೇಳಿದರು. 

ಸ್ಪೀಕರ್ ಮನವಿಗೆ ವಿಪಕ್ಷಗಳ ಸದಸ್ಯರು ಕಿವಿಗೂಡದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು. ಜುಲೈ 20 ರಂದು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದಲೂ ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ಮಣಿಪುರ ಪರಿಸ್ಥಿತಿ ಕುರಿತು ಚರ್ಚೆಗೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದು, ಕಲಾಪ ವ್ಯರ್ಥವಾಗುತ್ತಿದೆ.

ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಒತ್ತಾಯಿಸಿ ರಾಜ್ಯಸಭೆಯಲ್ಲೂ ವಿಪಕ್ಷಗಳು ಪ್ರತಿಭಟನೆ ಮುಂದುವರೆಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಗಿತ್ತು. ನಂತರ ಮತ್ತೆ ಕಲಾಪ ಆರಂಭವಾಗಿದ್ದು, ಪ್ರಶ್ನೋತ್ತರ ಕಲಾಪ ನಡೆಯುತ್ತಿದೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.