ಮಣಿಪುರದಲ್ಲಿ ಮಹಿಳೆಗೆ ಕಿರುಕುಳದ ವಿಡಿಯೋ ವೈರಲ್: BSF ಹೆಡ್ ಕಾನ್ಸ್ಟೆಬಲ್ ಅಮಾನತು!
ರಿಟೇಲ್ ಶಾಪ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಡಿ ಭದ್ರತಾ ಪಡೆಯ(BSF) ಹೆಡ್ ಕಾನ್ಸ್ಟೆಬಲ್ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಆತನನ್ನು ಅಮಾನತು ಮಾಡಲಾಗಿದೆ.

ನವದೆಹಲಿ: ರಿಟೇಲ್ ಶಾಪ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಡಿ ಭದ್ರತಾ ಪಡೆಯ(BSF) ಹೆಡ್ ಕಾನ್ಸ್ಟೆಬಲ್ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಆತನನ್ನು ಅಮಾನತು ಮಾಡಲಾಗಿದೆ.
ಕಳೆದ ಜುಲೈ 20ರಂದು ಇಂಫಾಲ್ನ ಪೆಟ್ರೋಲ್ ಪಂಪ್ ಬಳಿಯ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು ಬಿಎಸ್ಎಫ್ ಹೆಡ್ ಕಾನ್ಸ್ಟೆಬಲ್ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು ಆರೋಪಿಯನ್ನು ಹೆಡ್ ಕಾನ್ ಸ್ಟೇಬಲ್ ಸತೀಶ್ ಪ್ರಸಾದ್ ಎಂದು ಗುರುತಿಸಲಾಗಿದೆ. ಆತನನ್ನು ಅಮಾನತು ಮಾಡಲಾಗಿದ್ದು, ಪ್ರಕರಣ ಕೂಡ ದಾಖಲಾಗಿದೆ ಎಂದರು.
ಬಿಎಸ್ಎಫ್ ಆಂತರಿಕ ವಿಚಾರಣೆ
ಬಿಎಸ್ಎಫ್ ಆರೋಪಿ ವಿರುದ್ಧ ಆಂತರಿಕ ವಿಚಾರಣೆಯನ್ನು ಸಹ ಪ್ರಾರಂಭಿಸಿದೆ. ಆರೋಪಿಯನ್ನು ಕಟ್ಟುನಿಟ್ಟಾದ ಬಂಧನದಲ್ಲಿ ಇರಿಸಲಾಗಿದ್ದು ಇಲಾಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಈ ಹಿಂದೆ ತೌಬಲ್ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊ ಕೂಡ ವೈರಲ್ ಆಗಿತ್ತು. ಇದರಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆಯ ಉಸ್ತುವಾರಿ ವಹಿಸಿರುವ ಹಿರಿಯ ಅಧಿಕಾರಿಯೊಬ್ಬರು, ಗುರುತಿಸಲಾದ ಹಲವಾರು ಶಂಕಿತ ಸ್ಥಳಗಳ ಮೇಲೆ ದಾಳಿ ಮಾಡುವ ಮೂಲಕ ಉಳಿದ ಆರೋಪಿಗಳನ್ನು ಗುರುತಿಸಲು ರಾಜ್ಯ ಪೊಲೀಸರು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.
ಸಂತ್ರಸ್ತರು ಬಾರದೇ ಇರುವುದರಿಂದ ತನಿಖೆಗೆ ತೊಂದರೆ
ಏತನ್ಮಧ್ಯೆ, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಹಲವಾರು ಶೂನ್ಯ ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಮಣಿಪುರ ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ ಸಂತ್ರಸ್ತರ ಲಭ್ಯತೆಯಿಲ್ಲದ ಕಾರಣ ಆ ಎಫ್ಐಆರ್ಗಳಲ್ಲಿನ ತನಿಖೆಯೂ ಪ್ರಗತಿಯಾಗುತ್ತಿಲ್ಲ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


