ಹರಿಯಾಣ: ಅವಳಿ ಹೆಣ್ಣು ಶಿಶುಗಳ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಾಯಿ!
ಹರಿಯಾಣದ ದನೋಡಾ ಗ್ರಾಮದಲ್ಲಿ ಪಾಪಿ ತಾಯಿಯೊಬ್ಬಳು ತನ್ನ ಅವಳಿ ಹೆಣ್ಣು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.

ಜಿಂದ್ (ಹರಿಯಾಣ): ಹರಿಯಾಣದ ದನೋಡಾ ಗ್ರಾಮದಲ್ಲಿ ಪಾಪಿ ತಾಯಿಯೊಬ್ಬಳು ತನ್ನ ಅವಳಿ ಹೆಣ್ಣು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.
ಶೀತಲ್ ಮಕ್ಕಳನ್ನು ಹತ್ಯೆಗೈದ ತಾಯಿಯಾಗಿದ್ದಾಳೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿತ ತಾಯಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಪತಿ ನೀಡಿದ ದೂರಿನ ಆಧಾರದ ಮೇಲೆ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದರು ಘಟನೆ ನಡೆದ 13 ದಿನಗಳ ಬಳಿಕ ಮಹಿಳೆ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ.
ಕೆಲಸದ ನಿಮಿತ್ತ ಜುಲೈ.12ರಂದು ಹೊಲಕ್ಕೆ ಹೋಗಿದ್ದೆ. ಮಧ್ಯಾಹ್ನ ಮನೆಗೆ ಬಂದಾಗ ಮನೆಯ ಹೊರಗೆ ದೊಡ್ಡ ಸಂಖ್ಯೆಯಲ್ಲಿ ಜನರು ನಿಂತಿದ್ದರು. ಮನೆಯೊಳಗೆ ಹೋದಾಗ ಅವಳಿ ಮಕ್ಕಳಾದ ಜಾನಕಿ ಮತ್ತು ಜಾನ್ವಿ ಇದ್ದಕ್ಕಿದ್ದಂತೆ ಮೃತಪಟ್ಟಿರುವುದಾಗಿ ಶೀತಲ್ ಹೇಳಿದಳು.
ಆಕೆಯ ಮಾತನ್ನು ನಂಬಿ ಮಕ್ಕಳ ಮರಣೋತ್ತರ ಪರೀಕ್ಷೆ ನಡೆಸದೆ ಸಮಾಧಿ ಮಾಡಲಾಗಿತ್ತು ಎಂದು ವ್ಯಕ್ತಿ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಮಹಿಳೆ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಹೂತಿರುವ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲು ಮುಂದಾಗಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


