ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಪ್ರದರ್ಶಿಸುವುದು ಕಡ್ಡಾಯ: ಕೇಂದ್ರ ಸರ್ಕಾರ
ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಮತ್ತು ಹಾಟ್‌ಸ್ಟಾರ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕಾರ್ಯಕ್ರಮದ ಸಮಯದಲ್ಲಿ ತಂಬಾಕು ಉತ್ಪನ್ನಗಳು ಅಥವಾ ಅವುಗಳ ಬಳಕೆಯನ್ನು ಪ್ರದರ್ಶಿಸಿದಾಗ ತಂಬಾಕು ವಿರೋಧಿ ಆರೋಗ್ಯ ಎಚ್ಚರಿಕೆಯನ್ನು ಪರದೆಯ ಕೆಳಭಾಗದಲ್ಲಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ನವದೆಹಲಿ: ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಮತ್ತು ಹಾಟ್‌ಸ್ಟಾರ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕಾರ್ಯಕ್ರಮದ ಸಮಯದಲ್ಲಿ ತಂಬಾಕು ಉತ್ಪನ್ನಗಳು ಅಥವಾ ಅವುಗಳ ಬಳಕೆಯನ್ನು ಪ್ರದರ್ಶಿಸಿದಾಗ ತಂಬಾಕು ವಿರೋಧಿ ಆರೋಗ್ಯ ಎಚ್ಚರಿಕೆಯನ್ನು ಪರದೆಯ ಕೆಳಭಾಗದಲ್ಲಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ನಿಯಂತ್ರಣ, ಉತ್ಪಾದನೆ, ಸರಬರಾಜು ಮತ್ತು ವಿತರಣೆ) ತಿದ್ದುಪಡಿ ನಿಯಮಗಳು 2023 ನ್ನು ಮೇ 31 ರಂದು ಸರ್ಕಾರ ಹೊರಡಿಸಿರುವುದಾಗಿ ಆರೋಗ್ಯ ರಾಜ್ಯ ಸಚಿವ ಎಸ್‌ಪಿ ಸಿಂಗ್ ಬಘೆಲ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ತಂಬಾಕು ಉತ್ಪನ್ನಗಳನ್ನು ಒಳಗೊಂಡಿರುವ ಯಾವುದೇ ಆನ್‌ಲೈನ್ ಕಂಟೆಂಟ್‌ನಲ್ಲಿ ಆರೋಗ್ಯ ಎಚ್ಚರಿಕೆಗಳು ಮತ್ತು ಹಕ್ಕು ನಿರಾಕರಣೆಗಳನ್ನು ಸೇರಿಸಬೇಕು. ಕಾರ್ಯಕ್ರಮದ ಸಮಯದಲ್ಲಿ ತಂಬಾಕು ಉತ್ಪನ್ನಗಳು ಅಥವಾ ಅವುಗಳ ಬಳಕೆಯನ್ನು ಪ್ರದರ್ಶಿಸಿದಾಗ ಒಟಿಟಿ ವೇದಿಕೆಯು ತಂಬಾಕು ವಿರೋಧಿ ಆರೋಗ್ಯ ಎಚ್ಚರಿಕೆಯನ್ನು ಪರದೆಯ ಕೆಳಭಾಗದಲ್ಲಿ ಪ್ರದರ್ಶಿಸಬೇಕು ಎಂದು ಅಧಿಸೂಚನೆಯಲ್ಲಿ ಹೇಳಿದೆ.
ಹೊಸದಾಗಿ ಅಧಿಸೂಚಿಸಲಾದ ನಿಯಮದ ಪ್ರಕಾರ, ತಂಬಾಕು ಉತ್ಪನ್ನಗಳು ಪ್ರದರ್ಶಿಸುವ ಆನ್‌ಲೈನ್ ಕಂಟೆಂಟ್‌ನ ಪ್ರತಿ ಪ್ರಕಾಶಕರು ಕಾರ್ಯಕ್ರಮದ ಪ್ರಾರಂಭ ಹಾಗೂ ಮಧ್ಯದಲ್ಲಿ ಕನಿಷ್ಠ 30 ಸೆಕೆಂಡ್‌ಗಳ ಕಾಲ ತಂಬಾಕು ವಿರೋಧಿ ಎಚ್ಚರಿಕೆಗಳನ್ನು ಪ್ರದರ್ಶಿಸಬೇಕು. ತಂಬಾಕು ಉತ್ಪನ್ನಗಳ ಪ್ರದರ್ಶನ ಅಥವಾ ಅವುಗಳ ಬಳಕೆಯ ಅವಧಿಯಲ್ಲಿ ಪರದೆಯ ಕೆಳಭಾಗದಲ್ಲಿ ತಂಬಾಕು ವಿರೋಧಿ ಆರೋಗ್ಯ ಎಚ್ಚರಿಕೆಯನ್ನು ಪ್ರಮುಖ ಸ್ಥಿರ ಸಂದೇಶವಾಗಿ ಪ್ರದರ್ಶಿಸಬೇಕು ಮತ್ತು ಕಾರ್ಯಕ್ರಮದ ಪ್ರಾರಂಭ ಮತ್ತು ಮಧ್ಯದಲ್ಲಿ ಕನಿಷ್ಠ 20 ಸೆಕೆಂಡುಗಳ ಕಾಲ ತಂಬಾಕಿನ ದುಷ್ಪರಿಣಾಮಗಳ ಕುರಿತು ಧ್ವನಿ-ದೃಶ್ಯಗಳೊಂದಿಗೆ ಪ್ರದರ್ಶಿಸಬೇಕು ಎಂದು ಬಾಘೆಲ್ ತಿಳಿಸಿದ್ದಾರೆ.
ಇದಲ್ಲದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರತಿನಿಧಿಗಳನ್ನು ಒಳಗೊಂಡಿರುವ ಅಂತರ-ಸಚಿವಾಲಯ ಸಮಿತಿಯ ಮೂಲಕ 2023 ರ ತಿದ್ದುಪಡಿ ನಿಯಮಗಳ ನಿಯಮ (6) ರ ಪ್ರಕಾರ ಎಲ್ಲಾ ಅನುಸರಣೆಗಳನ್ನು ಖಾತ್ರಿಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


