ದೇಶ

ಉತ್ತರ ಪ್ರದೇಶ: ಗಾಯಗೊಂಡ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕನ ಬಂಧನ

ಯುವಕನೋರ್ವ ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವೀಡಿಯೋ ಸೆರೆಯಾಗಿದ್ದು, ಆತನನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶ: ಗಾಯಗೊಂಡ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕನ ಬಂಧನ
ಬಂಧನ (ಸಂಗ್ರಹ ಚಿತ್ರ)
Published On :

ನವದೆಹಲಿ: ಯುವಕನೋರ್ವ ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವೀಡಿಯೋ ಸೆರೆಯಾಗಿದ್ದು, ಆತನನ್ನು ಬಂಧಿಸಲಾಗಿದೆ. 

ಆಗ್ರಾದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗತೊಡಗಿದೆ. ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ತಲೆ ಭಾಗದಲ್ಲಿ ಯುವಕ ಒದ್ದಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಅಷ್ಟೇ ಅಲ್ಲದೇ ವ್ಯಕ್ತಿಯನ್ನು ಆ ಯುವಕ ಹಾಗೂ ಯುವಕನ ಸ್ನೇಹಿತರು ನಿಂದಿಸುತ್ತಿರುವುದೂ ಸಹ ಸ್ಪಷ್ಟವಾಗಿ ತಿಳಿಯುತ್ತದೆ.

ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕ್ರಮ ಕೈಗೊಂಡು ಯುವಕನನ್ನು ಬಂಧಿಸಿದ್ದಾರೆ. ಈ ವೀಡಿಯೋ ನಾಲ್ಕು ತಿಂಗಳ ಹಿಂದಿನದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತರ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಡಿಸಿಪಿ ಸೂರಜ್ ಕುಮಾರ್ ರೈ ತಿಳಿಸಿದ್ದಾರೆ. ಆರೋಪಿ ಆದಿತ್ಯ ವಿರುದ್ಧ ಸೆಕ್ಷನ್ 307 ಅಡಿಯಲ್ಲಿ ಹತ್ಯೆ ಯತ್ನದ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.