ಬಿಹಾರ: ವಿದ್ಯುತ್ ಕಡಿತ ವಿರೋಧಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಗುಂಡಿನ ದಾಳಿ; ಓರ್ವ ಸಾವು, ಇಬ್ಬರು ಗಂಭೀರ!
ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು ಇದರಲ್ಲಿ ಓರ್ವ ಮೃತಪಟ್ಟಿದ್ದು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಾಟ್ನಾ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು ಇದರಲ್ಲಿ ಓರ್ವ ಮೃತಪಟ್ಟಿದ್ದು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಪ್ರತಿಭಟನಾಕಾರರ ಕಲ್ಲು ತೂರಾಟದಲ್ಲಿ 12ಕ್ಕೂ ಹೆಚ್ಚು ಪೊಲೀಸರು ಮತ್ತು ವಿದ್ಯುತ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಗುಂಡಿನ ದಾಳಿಯಲ್ಲಿ ಗ್ರಾಮಸ್ಥರೊಬ್ಬರು ಸಾವನ್ನಪ್ಪಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಆತನ ಹೆಸರು ಬಾಸಲ್ ಗ್ರಾಮದ ನಿವಾಸಿ ಖುರ್ಷಿದ್ ಆಲಂ (34) ಎಂದು ಹೇಳಲಾಗಿದೆ. ಮತ್ತೊಂದೆಡೆ, ಬರ್ಸೋಯ ಚಾಪಖೋಡ್ ಪಂಚಾಯತ್ ನಿವಾಸಿ ನಿಯಾಜ್ ಆಲಂ (32) ಸ್ಥಿತಿ ಗಂಭೀರವಾಗಿದೆ. ಆದರೆ ಪೊಲೀಸರ ಗೋಲಿಬಾರ್‌ನಲ್ಲಿ 5 ಜನರು ಗುಂಡು ಹಾರಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬರ್ಸೋಯಿ ಉಪವಿಭಾಗದಲ್ಲಿ ಬುಧವಾರ ಮಧ್ಯಾಹ್ನ 12:30ಕ್ಕೆ ಒಂದು ಸಾವಿರಕ್ಕೂ ಹೆಚ್ಚು ಜನರು ವಿದ್ಯುತ್ ಕಡಿತದ ವಿರುದ್ಧ ರಸ್ತೆಗಿಳಿದರು. ಪ್ರತಿಭಟನಾಕಾರರು ವಿದ್ಯುತ್ ಕಚೇರಿಗೆ ಘೇರಾವ್ ಹಾಕಿದರು. ಬಸ್ಟೋಲ್ ಚೌಕ್‌ನ ಮುಖ್ಯರಸ್ತೆ ಮತ್ತು ಪ್ರಾಣ್‌ಪುರದ ಬರ್ಸೋಯ್ ಬ್ಲಾಕ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಜನರು ಜಾಮ್ ಮಾಡುವ ಮೂಲಕ ಪ್ರತಿಭಟನೆಯನ್ನು ಪ್ರಾರಂಭಿಸಿದರು.
ಈ ವೇಳೆ ಪೊಲೀಸರು ಗುಂಪನ್ನು ನಿಯಂತ್ರಿಸಲು ಮುಂದಾದಾಗ ಆಕ್ರೋಶಗೊಂಡ ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮೊದಲು ಲಾಠಿ ಪ್ರಹಾರ ನಡೆಸಿದರು. ಉದ್ರಿಕ್ತಗೊಂಡ ಗುಂಪು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಗುಂಡು ಹಾರಿಸಿದರು.
ಬುಧವಾರ ಬೆಳಗ್ಗೆ 5ರಿಂದ 11ರವರೆಗೆ ನಿರ್ವಹಣಾ ಕಾಮಗಾರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದ ಜನರು ಸಿಟ್ಟಿಗೆದ್ದರು.
ಕತಿಹಾರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಗುಂಡು ಹಾರಿಸಿದ ನಂತರ ರಾಜ್ಯದಲ್ಲಿ ರಾಜಕೀಯ ಚರ್ಚೆ ಕಾವೇರಿದೆ. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಪ್ರತಿಪಕ್ಷ ನಾಯಕ ವಿಜಯ್ ಸಿನ್ಹಾ ಸ್ಥಳಕ್ಕೆ ತೆರಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


