ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಆರ್'ಎಸ್ ಪಕ್ಷಗಳಿಂದ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ
ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಕಲಾಪ ಅಸ್ತವ್ಯಸ್ತವಾಗಿರುವ ನಡುವೆಯೇ ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತು ಬಿಆರ್'ಎಸ್ ಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿವೆ.

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಕಲಾಪ ಅಸ್ತವ್ಯಸ್ತವಾಗಿರುವ ನಡುವೆಯೇ ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತು ಬಿಆರ್'ಎಸ್ ಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿವೆ.
ಜುಲೈ 20 ರಂದು ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ವಿಚಾರದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ನಿರಂತರ ಗದ್ದಲವಾಗುತ್ತಿದೆ.
ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯವು ಅಂಕಿಅಂಶ ಪರೀಕ್ಷೆಯಲ್ಲಿ ವಿಫಲವಾಗುವುದಾದರೂ, ಚರ್ಚೆಯ ಸಮಯದಲ್ಲಿ ಮಣಿಪುರ ವಿಷಯದ ಬಗ್ಗೆ ಸರ್ಕಾರವನ್ನು ಮೂಲೆಗುಂಪು ಮಾಡುವ ಮೂಲಕ ಗ್ರಹಿಕೆಯ ಯುದ್ಧವನ್ನು ಗೆಲ್ಲುತ್ತೇವೆ ಎಂದು ವಿರೋಧ ಪಕ್ಷಗಳು ವಾದಿಸಿವೆ.'
ಕಾಂಗ್ರೆಸ್ ಮಾತ್ರವಲ್ಲದೆ, ತೆಲಂಗಾಣದ ಆಡಳಿತಾರೂಢ ಕೆ ಚಂದ್ರಶೇಖರ್ ರಾವ್ ಅವರ ಭಾರತ ರಾಷ್ಟ್ರ ಸಮಿತಿ ಕೂಡ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ.
ಕೆಸಿಆರ್ ಅವರು 26 ವಿರೋಧ ಪಕ್ಷಗಳನ್ನು ಒಳಗೊಂಡಿರುವ 'ಇಂಡಿಯಾ' ಮೈತ್ರಿ ಬಣದಲ್ಲಿ ಇಲ್ಲ ಎನ್ನುವುದು ಗಮನಿಸಬೇಕಾದ ಸಂಗತಿ.
ಕಾಂಗ್ರೆಸ್ ನೇತೃತ್ವದಲ್ಲಿ ಮೈತ್ರಿಕೂಟ ಮುನ್ನಡೆಯುವುದರ ಬಗ್ಗೆ ವಿರೋಧ ಹೊಂದಿರುವ ಕಾರಣ ಕೆಸಿಆರ್ ಅವರು ಮೈತ್ರಿಕೂಟದಿಂದ ದೂರವೇ ಉಳಿದಿದ್ದಾರೆ. ಇನ್ನೊಂದೆಡೆ ಅವರು ಎನ್‌ಡಿಎ ಜತೆ ಸೇರಿಕೊಳ್ಳಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಅದರ ನಡುವೆಯೇ ಅವರು ಕೇಂದ್ರ ಸರ್ಕಾರದ ವಿರುದ್ಧ ಪ್ರತ್ಯೇಕವಾಗಿ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ತಾವು ಈ ಎರಡೂ ಬಣಗಳಿಗೆ ಸೇರಿಲ್ಲ ಎಂಬ ಸುಳಿವು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


