ದೇಶ

ಮಣಿಪುರಕ್ಕೆ ಭೇಟಿ ನೀಡಲು ವಿರೋಧ ಪಕ್ಷಗಳ INDIA ಒಕ್ಕೂಟದ ಸಂಸದರು ಮುಂದು

ಮೇ 3ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಪರಿಶೀಲನೆ ನಡೆಸಲು ವಿರೋಧ ಪಕ್ಷಗಳ ಮೈತ್ರಿಕೂಟ INDIAದ ಭಾಗವಾದ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.

ಮಣಿಪುರಕ್ಕೆ ಭೇಟಿ ನೀಡಲು ವಿರೋಧ ಪಕ್ಷಗಳ INDIA ಒಕ್ಕೂಟದ ಸಂಸದರು ಮುಂದು
ಮಣಿಪುರದಲ್ಲಿ ಹಿಂಸಾಚಾರ
Published On :

ನವದೆಹಲಿ: ಮೇ 3ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಪರಿಶೀಲನೆ ನಡೆಸಲು ವಿರೋಧ ಪಕ್ಷಗಳ ಮೈತ್ರಿಕೂಟ INDIAದ ಭಾಗವಾದ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.

ಸಂಸತ್ತಿನ 20ಕ್ಕೂ ಹೆಚ್ಚು ವಿರೋಧ ಪಕ್ಷದ ಸದಸ್ಯರ ನಿಯೋಗವು ಈ ವಾರಾಂತ್ಯದಲ್ಲಿ ಮಣಿಪುರಕ್ಕೆ ಭೇಟಿ ನೀಡಲಿದ್ದು, ನೇರವಾಗಿ ರಾಜ್ಯದಲ್ಲಿನ ಪರಿಸ್ಥಿತಿಯ ಅವಲೋಕನ ಮಾಡಲಿದೆ ಎಂದು ಲೋಕಸಭೆಯ ಕಾಂಗ್ರೆಸ್ ವಿಪ್ ಮಾಣಿಕಂ ಟ್ಯಾಗೋರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡಲು ವಿರೋಧ ಪಕ್ಷದ ನಾಯಕರು ಕೆಲವು ಸಮಯದಿಂದ ಪ್ರಯತ್ನಿಸುತ್ತಿದ್ದರು. ಆದರೆ, ಅಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅನುಮತಿ ನಿರಾಕರಿಸಲಾಗಿತ್ತು.

Story image
ಜುಲೈ 27, 2023, ಗುರುವಾರ, ನವದೆಹಲಿಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಸಂಸತ್ ಭವನದ ಸಂಕೀರ್ಣದಲ್ಲಿ
ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ ದೃಶ್ಯ. (ಫೋಟೋ | ಪಿಟಿಐ)

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಮಣಿಪುರದ ಕೆಲವು ಸ್ಥಳಗಳಿಗೆ ಭೇಟಿ ನೀಡಿದ್ದರು.

26 ವಿರೋಧ ಪಕ್ಷಗಳ ಮೈತ್ರಿಕೂಟದ INDIAದ ಹಲವಾರು ಸಂಸದರು ಈ ನಿಯೋಗದ ಭಾಗವಾಗಲಿದ್ದಾರೆ.

ವಿರೋಧ ಪಕ್ಷಗಳ ಸದಸ್ಯರು ಸಂಸತ್ತಿನ ಉಭಯ ಸದನಗಳಲ್ಲಿ ಮಣಿಪುರದ ವಿಚಾರವಾಗಿ ಚರ್ಚೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ ಮತ್ತು ಪ್ರಧಾನಿ ಮೋದಿ ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಕೇಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.