ವಿಕ್ರಮಸಿಂಘೆ ಭಾರತ ಭೇಟಿ ಬೆನ್ನಲ್ಲೇ ಶ್ರೀಲಂಕಾದಿಂದ 15 ಭಾರತೀಯ ಮೀನುಗಾರರ ಬಿಡುಗಡೆ
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ, 15 ತಮಿಳುನಾಡು ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾದಿಂದ ಬಿಡುಗಡೆಯಾದ ಭಾರತೀಯ ಮೀನುಗಾರರು ಗುರುವಾರ ಕೊಲಂಬೋದಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಚೆನ್ನೈ: ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ, 15 ತಮಿಳುನಾಡು ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಲಂಕಾದಿಂದ ಬಿಡುಗಡೆಯಾದ ಭಾರತೀಯ ಮೀನುಗಾರರು ಗುರುವಾರ ಕೊಲಂಬೋದಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಲಂಕಾಕ್ಕೆ ಸೇರಿದ ಜಲ ಪ್ರದೇಶದಲ್ಲಿ ಭೇಟಿಯಾಡಿದ ಆರೋಪದ ಮೇರೆಗೆ ಈ ಮೀನುಗಾರರನ್ನು ಇತ್ತೀಚೆಗೆ ಬಂಧಿಸಿ ಜೈಲಿನಲ್ಲಿ ಇರಿಸಲಾಗಿತ್ತು. ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಮೀನುಗಾರರನ್ನು ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಕಳೆದ ವಾರವಷ್ಟೇ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಕುರಿತು ಚರ್ಚೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


