ಪುಣೆ: ಪತಿ ಸಾಲ ಮರುಪಾವತಿ ಮಾಡಲಿಲ್ಲ ಎಂದು ಆತನ ಎದುರಲ್ಲೇ ಪತ್ನಿ ಮೇಲೆ ಅತ್ಯಾಚಾರ, ಬಂಧನ
ತೆಗೆದುಕೊಂಡ ಸಾಲ ಮರುಪಾವತಿ ಮಾಡಲಿಲ್ಲ ಎಂದು ಆಕ್ರೋಶಗೊಂಡ ಲೇವಾದೇವಿಗಾರನೊಬ್ಬ ಆತನ ಪತ್ನಿ ಮೇಲೆ ಆತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆ: ತೆಗೆದುಕೊಂಡ ಸಾಲ ಮರುಪಾವತಿ ಮಾಡಲಿಲ್ಲ ಎಂದು ಆಕ್ರೋಶಗೊಂಡ ಲೇವಾದೇವಿಗಾರನೊಬ್ಬ ಆತನ ಪತ್ನಿ ಮೇಲೆ ಆತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ನಗರದಲ್ಲಿ ಈ ಘಟನೆ ನಡೆದಿದ್ದು, ಅತ್ಯಾಚಾರ, ಪ್ರಾಣ ಬೆದರಿಕೆ ಪ್ರಕರಣದಡಿಯಲ್ಲಿ 47 ವರ್ಷದ ಲೇವಾದೇವಿಗಾರನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ಮಹಿಳೆಯ ಪತಿ ಸಾಲ ಪಡೆದಿದ್ದರು, ಆದರೆ ಅದನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಸಾಲವಾಗಿ ನೀಡಿದ್ದ ಹಣವನ್ನು ಲೇವಾದೇವಿದಾರ ಹಿಂತಿರುಗಿಸುವಂತೆ ಕೇಳಿದ್ದು, ಈ ವೇಳೆ ತನ್ನ ಬಳಿ ಹಣವಿಲ್ಲ ಎಂದು ಸಂತ್ರಸ್ಥೆಯ ಪತಿ ಹೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಆರೋಪಿಯು ಮಹಿಳೆಯ ಪತಿಗೆ ಚಾಕು ತೋರಿಸಿ ಬೆದರಿಸಿ ನಂತರ ಆತನ ಸಮ್ಮುಖದಲ್ಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಾತ್ರವಲ್ಲದೇ ಈ ಕೃತ್ಯವನ್ನು ಆರೋಪಿಗಳು ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ ತಾವು ಪ್ರಕರಣ ದಾಖಲಿಸಿಕೊಂಡಿದ್ದು, ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


