ದೇಶ

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್'ಗೆ ಅನಾರೋಗ್ಯ, ಇಂದು ಯಾವುದೇ ಪ್ರಕರಣ ಕೈಗೆತ್ತಿಕೊಳ್ಳುತ್ತಿಲ್ಲ: ಸುಪ್ರೀಂ ಕೋರ್ಟ್

ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್'ಗೆ ಅನಾರೋಗ್ಯ, ಇಂದು ಯಾವುದೇ ಪ್ರಕರಣ ಕೈಗೆತ್ತಿಕೊಳ್ಳುತ್ತಿಲ್ಲ: ಸುಪ್ರೀಂ ಕೋರ್ಟ್
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್
Published On :

ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ.

ಈ ಪತ್ರದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು 28.7.2023ರಂದು ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದಿಲ್ಲ. ಮುಖ್ಯ ನ್ಯಾಯಮೂರ್ತಿ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ವ್ಯಾಪ್ತಿಗೆ ಬರುವ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ. ಇಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು, ಏಕಸದಸ್ಯ ಪೀಠದ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳಲಿದ್ದಾರೆ. ಅಂದರೆ 28.07.2023ರಂದು ನ್ಯಾಯಾಲಯದ 10ನೇ ಕೊಠಡಿಯಲ್ಲಿ 11.30ಗೆ ವರ್ಗಾವಣೆ ಅರ್ಜಿಗಳನ್ನು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು ಇಂದು ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಪ್ರಕರಣದ ಕುರಿತು ವಿಚಾರಣೆ ನಡೆಸಬೇಕಿತ್ತು.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿ ರುಜಿರಾ ಅವರ ಮನವಿ, ಇತಹೆ ಹತ್ಯ ಪ್ರಕರಣಗಳ ವಿಚಾರಣೆ ನಡೆಸಬೇಕಿತ್ತು. ಕುಖ್ಯಾತ ನಿಥಾರಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊನೀಂದರ್ ಸಿಂಗ್ ಪಂಧೇರ್ ಅವರ ಮನವಿಯನ್ನು ವಿಚಾರಣೆ ನಡೆಸಬೇಕಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.