ಟಿವಿ ಆ್ಯಂಕರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಮಾನಕಾರಿ ಪೋಸ್ಟ್; ಮಾಜಿ ನ್ಯಾಯಾಧೀಶ ಸುದೀಪ್ ವಿರುದ್ಧ ಪ್ರಕರಣ ದಾಖಲು
ಹಿರಿಯ ಮಹಿಳಾ ಟಿವಿ ಪತ್ರಕರ್ತೆಯ ವಿರುದ್ಧ ಸಾಮಾಜಿಕ ಮಾಧ್ಯಮದ ಮೂಲಕ ಅವಹೇಳನಕಾರಿ ಟೀಕೆ ಮಾಡಿ ಪೋಸ್ಟ್ ಮಾಡಿದ ಆರೋಪದಡಿ ಮಾಜಿ ನ್ಯಾಯಾಧೀಶರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನವದೆಹಲಿ: ಹಿರಿಯ ಮಹಿಳಾ ಟಿವಿ ಪತ್ರಕರ್ತೆಯ ವಿರುದ್ಧ ಸಾಮಾಜಿಕ ಮಾಧ್ಯಮದ ಮೂಲಕ ಅವಹೇಳನಕಾರಿ ಟೀಕೆ ಮಾಡಿ ಪೋಸ್ಟ್ ಮಾಡಿದ ಆರೋಪದಡಿ ಮಾಜಿ ನ್ಯಾಯಾಧೀಶರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮಾಜಿ ಉಪ ನ್ಯಾಯಾಧೀಶ ಎಸ್ ಸುದೀಪ್ ಅವರು ಇತ್ತೀಚಿನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಮಹಿಳಾ ಟಿವಿ ನಿರೂಪಕರೊಬ್ಬರ ವಿರುದ್ಧ ವಿಡಂಬನಾತ್ಮಕ ಸುದ್ದಿ ವಿಶ್ಲೇಷಣೆ ಕಾರ್ಯಕ್ರಮವನ್ನು ಟೀಕಿಸಿದ್ದು ಮಾತ್ರವಲ್ಲದೇ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು. ಸುದೀಪ್ ಅವರ ಈ ಪೋಸ್ಟ್ ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಮಾಜಿ ಜಡ್ಜ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 354 ಎ (iv) (ಲೈಂಗಿಕ ಬಣ್ಣದ ಟೀಕೆಗಳನ್ನು ಮಾಡುವುದು) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ವಾರ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸುದೀಪ್ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


