ದೇಶ

INDIAದ 20 ಸಂಸದರ ನಿಯೋಗ ಮಣಿಪುರಕ್ಕೆ ಭೇಟಿ; ಪರಿಸ್ಥಿತಿ ಪರಿಶೀಲಿಸಿ, ಸರ್ಕಾರ, ಸಂಸತ್ತಿಗೆ ಶಿಫಾರಸು

ಪ್ರತಿಪಕ್ಷಗಳ ಮೈತ್ರಿಕೂಟ INDIAದ 20 ಸಂಸದರ ನಿಯೋಗ ಶನಿವಾರ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ಎರಡು ದಿನಗಳ ಕಾಲ ಅಲ್ಲಿನ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿ, ರಾಜ್ಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸಂಸತ್ತಿಗೆ ಶಿಫಾರಸುಗಳನ್ನು ಮಾಡಲಿದೆ.

INDIAದ 20 ಸಂಸದರ ನಿಯೋಗ ಮಣಿಪುರಕ್ಕೆ ಭೇಟಿ; ಪರಿಸ್ಥಿತಿ ಪರಿಶೀಲಿಸಿ, ಸರ್ಕಾರ, ಸಂಸತ್ತಿಗೆ ಶಿಫಾರಸು
ಸಂಸತ್ತು
Published On :

ನವದೆಹಲಿ: ಪ್ರತಿಪಕ್ಷಗಳ ಮೈತ್ರಿಕೂಟ INDIAದ 20 ಸಂಸದರ ನಿಯೋಗ ಶನಿವಾರ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ಎರಡು ದಿನಗಳ ಕಾಲ ಅಲ್ಲಿನ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಿ, ರಾಜ್ಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸಂಸತ್ತಿಗೆ ಶಿಫಾರಸುಗಳನ್ನು ಮಾಡಲಿದೆ.

ಮಣಿಪುರ ಭೇಟಿಗೂ ಮುನ್ನ ಲೋಕಸಭೆಯ ಕಾಂಗ್ರೆಸ್‌ ಉಪ ನಾಯಕ ಗೌರವ್ ಗೊಗೊಯ್ ಅವರು ಮಣಿಪುರ ಹಿಂಸಾಚಾರದ ಬಗ್ಗೆ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. 

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂಸದ ನಸೀರ್ ಹುಸೇನ್ ಅವರು, 16 ಪಕ್ಷಗಳ 20 ಸಂಸದರು ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದರು.

ಪ್ರತಿಪಕ್ಷಗಳ ನಿಯೋಗ ರಾಜ್ಯ ಭೇಟಿಗೆ ಅನುಮತಿ ನೀಡುವಂತೆ ಕೋರಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ INDIA ಪತ್ರ ಬರೆದಿದ್ದು, ಅವರು ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿಯೋಗವು ಭಾನುವಾರ ಬೆಳಗ್ಗೆ ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿ ಮಾಡಲಿದೆ ಎಂದು ಹುಸೇನ್ ಅವರು ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಹಾಗೂ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲು ನಾವು ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿದ್ದೇವೆ. ರಾಜ್ಯಪಾಲರನ್ನು ಭೇಟಿ ಮಾಡಲು ಸಹ ನಾವು ಅನುಮತಿ ಪಡೆದಿದ್ದೇವೆ ಎಂದು ಹುಸೇನ್ ಸುದ್ದಿಗಾರರಿಗೆ ಹೇಳಿದ್ದಾರೆ.

ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಮತ್ತು ಗೌರವ್ ಗೊಗೊಯ್, ಟಿಎಂಸಿಯ ಸುಶ್ಮಿತಾ ದೇವ್, ಜೆಎಂಎಂನ ಮಹುವಾ ಮಜಿ, ಡಿಎಂಕೆಯ ಕನಿಮೊಳಿ, ಎನ್‌ಸಿಪಿಯ ಮೊಹಮ್ಮದ್ ಫೈಜಲ್, ಆರ್‌ಎಲ್‌ಡಿಯ ಜಯಂತ್ ಚೌಧರಿ, ಆರ್‌ಜೆಡಿಯ ಮನೋಜ್ ಕುಮಾರ್ ಝಾ, ಟಿಎಂಸಿಯ ಎನ್ ಕೆ ಪ್ರೇಮಚಂದ್ರನ್ ಮತ್ತು ಜೆಡಿಯು ಮುಖ್ಯಸ್ಥ ರಾಜೀವ್ ರಂಜನ್(ಲಾಲನ್) ಸಿಂಗ್ ಸೇರಿದಂತೆ ಪ್ರತಿಪಕ್ಷಗಳ 20 ಸಂಸದರು INDIA ನಿಯೋಗದಲ್ಲಿರಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.