ಮಹಾರಾಷ್ಟ್ರದಲ್ಲಿ 2 ಬಸ್'ಗಳ ಮುಖಾಮುಖಿ ಡಿಕ್ಕಿ: 6 ಪ್ರಯಾಣಿಕರ ದುರ್ಮರಣ, 20 ಮಂದಿಗೆ ಗಾಯ
ಎರಡು ಬಸ್'ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುಂಬೈ ನಾಗ್ಪುರ ಹೆದ್ದಾರಿಯ ಲಕ್ಷ್ಮಿ ನಗರ ಮಲ್ಕಾಪುರ ಬಳಿಯ ಮೇಲ್ಸೇವೆಯಲ್ಲಿ ಶನಿವಾರ ನಡೆದಿದೆ.

ಬುಲ್ದಾನ (ಮಹರಾಷ್ಟ್ರ): ಎರಡು ಬಸ್'ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುಂಬೈ ನಾಗ್ಪುರ ಹೆದ್ದಾರಿಯ ಲಕ್ಷ್ಮಿ ನಗರ ಮಲ್ಕಾಪುರ ಬಳಿಯ ಮೇಲ್ಸೇವೆಯಲ್ಲಿ ಶನಿವಾರ ನಡೆದಿದೆ.
ಅಪಘಾತವಾದ ಬಸ್ ಟ್ರಾವೆಲ್ಸ್ ಸಂಖ್ಯೆ MH 08. 9458 ಆಗಿದ್ದು, ಅಮರನಾಥ ತೀರ್ಥಯಾತ್ರೆಯಿಂದ ಹಿಂತಿರುಗಿ ಹಿಂಗೋಲಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಈ ಬಸ್ನಲ್ಲಿ ಒಟ್ಟು 35 ರಿಂದ 40 ಯಾತ್ರಿಗಳಿದ್ದರು ಎನ್ನಲಾಗಿದೆ. ಮತ್ತೊಂದು ಬಸ್ ಟ್ರಾವೆಲ್ಸ್ ಸಂಖ್ಯೆ MH 27 BX 4466 ಆಗಿದ್ದು, ಈ ಬಸ್ ನಾಗ್ಪುರದಿಂದ ನಾಸಿಕ್ ಕಡೆಗೆ ಪ್ರಯಾಣಿಸುತ್ತಿದ್ದು, ಅಪಘಾತದ ಸಂದರ್ಭದಲ್ಲಿ 25 ರಿಂದ 30 ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ.
ಈ ಎರಡು ಬಸ್ಗಳು ಮಲ್ಕಾಪುರ ನಗರದ ಮೂಲಕ ಹಾದು ಹೋಗುವ ಹೆದ್ದಾರಿ ಸಂಖ್ಯೆ 6ರಲ್ಲಿ ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ 2 ಬಸ್ಗಳು ನಜ್ಜುಗುಜ್ಜಾಗಿವೆ. ಜೊತೆಗೆ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎರಡೂ ಟ್ರಾವೆಲ್ಸ್‌ನಲ್ಲಿದ್ದ ಪ್ರಯಾಣಿಕರು ಸೇರಿ 20ಕ್ಕೂ ಮಂದಿ ಗಾಯಗೊಂಡಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಬುಲ್ದಾನಾಗೆ ಸ್ಥಳಾಂತರಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


