'ಶಿಸ್ತು ಸಶಸ್ತ್ರ ಪಡೆಗಳ ಸೂಚ್ಯ ಲಕ್ಷಣ': ಸೇನಾ ಚಾಲಕನ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ಶಿಸ್ತು ಸಶಸ್ತ್ರ ಪಡೆಗಳ 'ಸೂಚ್ಯ ಲಕ್ಷಣ' ಮತ್ತು 'ನೆಗೋಶಬಲ್ ಅಲ್ಲದ ಸೇವೆ' ಎಂದು ಅಭಿಪ್ರಾಯ ಪಟ್ಟ ಸುಪ್ರೀಂ ಕೋರ್ಟ್, ನೋಟಿಸ್ ಇಲ್ಲದೆ ಹೆಚ್ಚುವರಿ ರಜೆ ತೆಗೆದುಕೊಂಡಿದ್ದ ಸೇನಾ ಚಾಲಕನ ವಜಾ ಆದೇಶವನ್ನು ಎತ್ತಿಹಿಡಿದಿದೆ.

ನವದೆಹಲಿ: ಶಿಸ್ತು ಸಶಸ್ತ್ರ ಪಡೆಗಳ 'ಸೂಚ್ಯ ಲಕ್ಷಣ' ಮತ್ತು 'ನೆಗೋಶಬಲ್ ಅಲ್ಲದ ಸೇವೆ' ಎಂದು ಅಭಿಪ್ರಾಯ ಪಟ್ಟ ಸುಪ್ರೀಂ ಕೋರ್ಟ್, ನೋಟಿಸ್ ಇಲ್ಲದೆ ಹೆಚ್ಚುವರಿ ರಜೆ ತೆಗೆದುಕೊಂಡಿದ್ದ ಸೇನಾ ಚಾಲಕನ ವಜಾ ಆದೇಶವನ್ನು ಎತ್ತಿಹಿಡಿದಿದೆ.
ವಜಾ ಆದೇಶ ಪ್ರಶ್ನಿಸಿ ಸೇನಾ ಚಾಲಕ ಮದನ್ ಪ್ರಸಾದ್ ಅವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ, ಸಶಸ್ತ್ರ ಪಡೆಗಳಲ್ಲಿ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ಶಿಸ್ತುಬದ್ಧವಾಗಿರುವುದು ಸಶಸ್ತ್ರ ಪಡೆಗಳ ಸೇವೆಯ ಆಂತರಿಕ ಭಾಗವಾಗಿದೆ ಎಂದು ಹೇಳಿದೆ.
ಮೇಲ್ಮನವಿದಾರ, ಮಾಜಿ ಸಿಪಾಯಿ, ಒಬ್ಬ ಸಾಮಾನ್ಯ ಅಪರಾಧಿಯಾಗಿ ಕಾಣಿಸುತ್ತಿದ್ದಾರೆ. ಅವರ ಮೇಲ್ಮನವಿ ಅಂಗೀಕರಿಸಿದರೆ, ಅದು ಸೇವೆಯಲ್ಲಿರುವ ಇತರರಿಗೆ ತಪ್ಪು ಸಂದೇಶ ಕಳುಹಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸೇನಾ ಚಾಲಕ ಮದನ್ ಪ್ರಸಾದ್ ಅವರು ಫೆಬ್ರವರಿ 2015ರಲ್ಲಿ ಸಶಸ್ತ್ರ ಪಡೆಗಳ ನ್ಯಾಯಮಂಡಳಿಯ ಲಖನೌ ಪ್ರಾದೇಶಿಕ ಪೀಠ ತನ್ನನ್ನು ಸೇವೆಯಿಂದ ವಜಾಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


