ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಶನಿವಾರ ಬೆಳಿಗ್ಗೆ ರಾತ್ರಿ 12:53 ಕ್ಕೆ ಭೂಕಂಪನ ಸಂಭವಿಸಿದ್ದು, ಭೂಕಂಪದ ಕೇಂದ್ರಬಿಂದು ಪೋರ್ಟ್ ಬ್ಲೇರ್ ನ ಆಗ್ನೇಯಕ್ಕೆ 126 ಕಿ.ಮೀ. ದೂರದಲ್ಲಿ ಮೇಲ್ಮೈಯಿಂದ 69 ಕಿಮೀ ಆಳದಲ್ಲಿ ಸಂಭವಿಸಿದೆ.
ಭೂಕಂಪನವು ಮಧ್ಯರಾತ್ರಿ 12:53ಕ್ಕೆ ಐಎಸ್ಟಿ ಮೇಲ್ಮೈಯಿಂದ 69 ಕಿಮೀ ಆಳದಲ್ಲಿ, 10.75 ಅಕ್ಷಾಂಶ ಮತ್ತು 93.47 ರೇಖಾಂಶದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Center For Seismology) ತಿಳಿದುಬಂದಿದೆ.
ಇದನ್ನೂ ಓದಿ: ಅನೈತಿಕ ಸಂಬಂಧ: ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮರಕ್ಕೆ ಕಟ್ಟಿ ಥಳಿತ!
ಏಪ್ರಿಲ್ನಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಿಜೋರಾಂ ಮತ್ತು ಕ್ಯಾಂಪ್ಬೆಲ್ ಕೊಲ್ಲಿಯಲ್ಲಿ ಎರಡು ಭೂಕಂಪಗಳು ಸಂಭವಿಸಿದವು. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಕ್ಯಾಂಪ್ಬೆಲ್ ಕೊಲ್ಲಿಗೆ ಅಪ್ಪಳಿಸಿತು ಮತ್ತು ಮಿಜೋರಾಂನಲ್ಲಿ ರಿಕ್ಟರ್ ಮಾಪಕದಲ್ಲಿ 4.7 ಅಳತೆಯ ಭೂಕಂಪ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


