ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರ ತಳ್ಳಿಹಾಕುವಂತಿಲ್ಲ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ
ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರವಿರಬಹುದು, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಶನಿವಾರ ಹೇಳಿದ್ದಾರೆ.

ನವದೆಹಲಿ: ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರವಿರಬಹುದು, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಶನಿವಾರ ಹೇಳಿದ್ದಾರೆ.
ಇಂಡಿಯಾ ಇಂಟರ್‌ನ್ಯಾಶನಲ್ ಸೆಂಟರ್‌ನಲ್ಲಿ ನಡೆದ ‘ರಾಷ್ಟ್ರೀಯ ಭದ್ರತಾ ದೃಷ್ಟಿಕೋನ’ ಎಂಬ ವಿಷಯದ ಕುರಿತು ಪತ್ರಕರ್ತರೊಂದಿಗಿನ ಸಂವಾದದ ವೇಳೆ ಮಣಿಪುರ ವಿಚಾರ ಕುರಿತು ಮಾತನಾಡಿರುವ ಅವರು, ನಮ್ಮ ದೇಶದ ಕಾನೂನು ವ್ಯವಸ್ಥೆ ಮತ್ತು ಪ್ರಧಾನ ಮಂತ್ರಿ ಅವರು ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಚರ್ಚೆಯನ್ನು ನಡೆಸಿದ್ದಾರೆ. ಆದರೆ, ಈ ಗಲಭೆಗೆ ಸಂಬಂಧಿಸಿದಂತೆ ವಿದೇಶಿ ಏಜೆನ್ಸಿಗಳ ಪಾತ್ರವಿದೆ, ಅದರಲ್ಲೂ ಚೀನಾದ ನೆರವು ಖಂಡಿತ ಇದೆ. ಇಂತಹ ಕೃತ್ಯಗಳನ್ನು ಮಾಡಲು ದಂಗೆಕೋರರಿಗೆ ಚೀನಾ ನೆರವು ನೀಡುತ್ತದೆ ಎಂದು ಹೇಳಿದರು.
ಈ ಹಿಂದೆ ಇಂತಹ ಅನೇಕ ಘಟನೆಗಳಿಗೆ ಚೀನಾ ಅನೇಕ ಬಂಡಾಯ ಗುಂಪುಗಳಿಗೆ ನೆರವುವನ್ನು ನೀಡಿತ್ತು, ಚೀನಾ ಇಂತಹ ದಂಗೆಗಳನ್ನು ನಡೆಸಲು ಹಲವು ವರ್ಷಗಳಿಂದ ನೆರವು ನೀಡುತ್ತಿದೆ. ಇಂದಿಗೂ ಇದು ಮುಂದುವರಿಯುತ್ತಿದೆ ಎಂದು ತಿಳಿಸಿದರು.
ಭಾರತ ಗೋಲ್ಡನ್ ಟ್ರಯಾಂಗಲ್‌ನಿಂದ ( ಥೈಲ್ಯಾಂಡ್ , ಮ್ಯಾನ್ಮಾರ್ ಮತ್ತು ಲಾವೋಸ್ ಗಡಿಗಳು ಸಂಧಿಸುವ ಪ್ರದೇಶ) ಸ್ವಲ್ಪ ದೂರದಲ್ಲಿದೆ. ಈ ಪ್ರದೇಶದಲ್ಲಿ ಚೀನಾ ಪ್ರಭಾವ ಹೆಚ್ಚಾಗಿದೆ, ಈ ಕಾರಣದಿಂದ ಈ ಗಡಿಗಳ ಮೂಲಕ ಚೀನಾದ ಮಾದಕವಸ್ತುಗಳು ಭಾರತ ಒಳಗೆ ಬರುತ್ತಿದೆ. ಈ ಹಿಂಸಾಚಾರದಲ್ಲಿ ದೊಡ್ಡ ದೊಡ್ಡ ವ್ಯಕ್ತಿ, ನಾಯಕರು ಪಾತ್ರಗಳು ಇರಬಹುದು. ಮಣಿಪುರ ಹಿಂಸಾಚಾರಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸದ್ಯದಲ್ಲೇ ಈ ಎಲ್ಲ ಘಟನೆಗಳಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.
ಬಳಿಕ ಮಾದಕ ವಸ್ತು ಕಳ್ಳಸಾಗಣೆ ಕುರಿತ ಪ್ರಶ್ನೆಗೆ ಉತ್ತರಿಸಿ, ಮಾದಕವಸ್ತುಗಳ ಕಳ್ಳಸಾಗಣೆ ಅನೇಕ ವರ್ಷಗಳಿಂದ ನಡೆಯುತ್ತಿದೆ. ಇನ್ನೂ ಈ ಸಾಗಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಎಂದರು,
ಅಗ್ನಿಪಥ್ ನೇಮಕಾತಿ ವಿಚಾರ ಕುರಿತು ಮಾತನಾಡಿ, ಇದು ಒಳ್ಳೆಯ ಯೋಜನೆಯೋ ಅಲ್ಲವೋ ಎಂಬುದನ್ನು ಕಾಲವೇ ಹೇಳಲಿದೆ. ಅಗ್ನಿಪಥ್ನ್ನು ಯೋಜಿತವಾಗಿ ಪ್ರಾರಂಭಿಸಲಾಗಿದೆ. ನಮಗೆ ಯುವ ಸೈನ್ಯದ ಅಗತ್ಯವಿದೆ ಆ ಕಾರಣದಿಂದ ಇದನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


