ಮಯನ್ಮಾರ್ 'ಅಕ್ರಮ' ವಲಸಿಗರ ಬಯೋಮೆಟ್ರಿಕ್ ವಿವರ ಸಂಗ್ರಹ ಪ್ರಕ್ರಿಯೆ ಆರಂಭಿಸಿದ ಮಣಿಪುರ
ಕೇಂದ್ರ ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಮಣಿಪುರ ಸರ್ಕಾರ ರಾಜ್ಯದಲ್ಲಿನ ಎಲ್ಲಾ "ಅಕ್ರಮ" ಮಯನ್ಮಾರ್ ವಲಸಿಗರ ಬಯೋಮೆಟ್ರಿಕ್ ಮಾಹಿತಿ ಸಂಗ್ರಹಿಸುವ ಅಭಿಯಾನವನ್ನು ಶನಿವಾರ...

ಇಂಫಾಲ್: ಕೇಂದ್ರ ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಮಣಿಪುರ ಸರ್ಕಾರ ರಾಜ್ಯದಲ್ಲಿನ ಎಲ್ಲಾ "ಅಕ್ರಮ" ಮಯನ್ಮಾರ್ ವಲಸಿಗರ ಬಯೋಮೆಟ್ರಿಕ್ ಮಾಹಿತಿ ಸಂಗ್ರಹಿಸುವ ಅಭಿಯಾನವನ್ನು ಶನಿವಾರ ಪುನರಾರಂಭಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
"ಮಣಿಪುರ ರಾಜ್ಯದಲ್ಲಿ ಮಯನ್ಮಾರ್ ಅಕ್ರಮ ವಲಸಿಗರ ಬಯೋಮೆಟ್ರಿಕ್ ವಿವರ ಸಂಗ್ರಹಿಸುವ ಅಭಿಯಾನವನ್ನು ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರ ಇಂದಿನಿಂದ ಎಲ್ಲಾ ಅಕ್ರಮ ವಲಸಿಗರ ಬಯೋಮೆಟ್ರಿಕ್ ವಿವರ ಸಂಗ್ರಹಿಸುವ ಅಭಿಯಾನ ಪುನರಾರಂಭಿಸಿದೆ” ಎಂದು ಪ್ರಕಟಣೆ ತಿಳಿಸಿದೆ.
ಇಂದು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಬಯೋಮೆಟ್ರಿಕ್ ಡೇಟಾ ಸಂಗ್ರಹಿಸುವ ಕಾರ್ಯ ನಡೆಯಿತು. ಇದಕ್ಕೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್ಸಿಆರ್ಬಿ) ಅಧಿಕಾರಿಗಳ ತಂಡ, ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸಹಾಯ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.
ಇಂಫಾಲ್ ಪೂರ್ವ ಜಿಲ್ಲೆಯ ಸೈಜ್ವಾದಲ್ಲಿರುವ ಶಿಬಿರದಲ್ಲಿ ಒಟ್ಟು 105 ಮಯನ್ಮಾರ್ ವಲಸಿಗರನ್ನು ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


