ನಿತೀಶ್ ಕುಮಾರ್ ಯಾವಾಗ ಬೇಕಾದರೂ ಎನ್ ಡಿಎಗೆ ಮರಳಬಹುದು: ರಾಮದಾಸ್ ಅಠವಳೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವಾಗ ಬೇಕಾದರೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಮರಳಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್...

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವಾಗ ಬೇಕಾದರೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಮರಳಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಅವರು ಶನಿವಾರ ಹೇಳಿದ್ದಾರೆ.
ಕೇಂದ್ರ ಕಲ್ಯಾಣ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಠವಳೆ, ಮಹಾರಾಷ್ಟ್ರದಲ್ಲಿ ಆಗಸ್ಟ್‌ನಲ್ಲಿ ನಡೆಯಲಿರುವ ವಿರೋಧ ಪಕ್ಷದ ನಾಯಕರ ಮೂರನೇ ಸಭೆಗೆ ಹಾಜರಾಗದಂತೆ ನಿತೀಶ್ ಕುಮಾರ್ ಅವರಿಗೆ ಒತ್ತಾಯಿಸಿದರು.
ನಿತೀಶ್ ಕುಮಾರ್ ಅವರು ನಮ್ಮಲ್ಲಿ ಒಬ್ಬರು ಮತ್ತು ಅವರು ಯಾವಾಗ ಬೇಕಾದರೂ ಹಿಂತಿರುಗಬಹುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(RPI) ಮುಖ್ಯಸ್ಥ ಅಠವಳೆ ಅವರು ಹೇಳಿದ್ದಾರೆ.
ಜನತಾದಳ(ಯುನೈಟೆಡ್) ಮುಖ್ಯಸ್ಥರೊಂದಿಗಿನ ಸುದೀರ್ಘ ಒಡನಾಟವನ್ನು ಉಲ್ಲೇಖಿಸಿದ ಕೇಂದ್ರ ಸಚಿವರು, ಎನ್‌ಡಿಎನಲ್ಲಿ ನಿತೀಶ್ ಅನುಪಸ್ಥಿತಿ ಸದಾ ಕಾಡುತ್ತಿದೆ. ಅವರು ನನ್ನ ಉತ್ತಮ ಸ್ನೇಹಿತ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


