2022-23ನೇ ಹಣಕಾಸು ವರ್ಷದಲ್ಲಿ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್ ಸಲ್ಲಿಕೆ!
2022-23ರ ಹಣಕಾಸು ವರ್ಷದಲ್ಲಿ ಗಳಿಸಿದ ಆದಾಯಕ್ಕಾಗಿ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ. ಇದು ಕಳೆದ ವರ್ಷ ಜುಲೈ 31 ರವರೆಗೆ ಸಲ್ಲಿಕೆಯಾಗಿದ್ದ ಐಟಿಆರ್‌ಗಳ ಸಂಖ್ಯೆಯನ್ನು ಮೀರಿಸಿದೆ.

ನವದೆಹಲಿ: 2022-23ರ ಹಣಕಾಸು ವರ್ಷದಲ್ಲಿ ಗಳಿಸಿದ ಆದಾಯಕ್ಕಾಗಿ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ. ಇದು ಕಳೆದ ವರ್ಷ ಜುಲೈ 31 ರವರೆಗೆ ಸಲ್ಲಿಕೆಯಾಗಿದ್ದ ಐಟಿಆರ್‌ಗಳ ಸಂಖ್ಯೆಯನ್ನು ಮೀರಿಸಿದೆ. ವೇತನದಾರರು ಹಿಂದಿನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ.
ಜುಲೈ 30ರ ಮಧ್ಯಾಹ್ನ 1 ಗಂಟೆಯವರೆಗೂ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್ ಸಲ್ಲಿಸಲಾಗಿದೆ. ಇದು ಕಳೆದ ವರ್ಷದ ಜುಲೈ 31ರವರೆಗೆ ಸಲ್ಲಿಕೆಯಾಗಿದ್ದ ಐಟಿಆರ್ ಗಳ ಸಂಖ್ಯೆಯನ್ನು ಮೀರಿಸಿದೆ ಎಂದು ಐಟಿ ಇಲಾಖೆ ಟ್ವೀಟ್ ಮಾಡಿದೆ. ಭಾನುವಾರ ಮಧ್ಯಾಹ್ನ 1 ಗಂಟೆಯವರೆಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿ 46 ಲಕ್ಷಕ್ಕೂ ಹೆಚ್ಚು ಯಶಸ್ವಿ ಫೈಲಿಂಗ್ ಲಾಗಿನ್‌ಗಳು ಕಂಡುಬಂದಿವೆ ಎಂದು ಇಲಾಖೆ ತಿಳಿಸಿದೆ.
"ಇಂದು ಮಧ್ಯಾಹ್ನ 1 ಗಂಟೆಯವರೆಗೆ 10.39 ಲಕ್ಷ ಐಟಿಆರ್‌ಗಳನ್ನು ಸಲ್ಲಿಸಲಾಗಿದೆ ಮತ್ತು ಕಳೆದ 1 ಗಂಟೆಯಲ್ಲಿ 3.04 ಲಕ್ಷ ಐಟಿಆರ್‌ಗಳನ್ನು ಸಲ್ಲಿಸಲಾಗಿದೆ" ಎಂದು ಐಟಿ ಇಲಾಖೆ ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


