ದೇಶ

ದ್ವೇಷ ಪ್ರಚೋದನೆ: ಮಣಿಪುರ ITLF ವಕ್ತಾರರ ವಿರುದ್ಧ ಎಫ್ಐಆರ್ ದಾಖಲು

ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದಿಸಿದ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತಂದ ಆರೋಪದ ಮೇಲೆ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ(ಐಟಿಎಲ್‌ಎಫ್) ವಕ್ತಾರ ಗಿಂಜಾ ವುಲ್‌ಜಾಂಗ್ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ...

ದ್ವೇಷ ಪ್ರಚೋದನೆ: ಮಣಿಪುರ ITLF ವಕ್ತಾರರ ವಿರುದ್ಧ ಎಫ್ಐಆರ್ ದಾಖಲು
ಗಿಂಜಾ ವುಲ್‌ಜಾಂಗ್
Published On :

ಇಂಫಾಲ್: ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದಿಸಿದ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತಂದ  ಆರೋಪದ ಮೇಲೆ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ(ಐಟಿಎಲ್‌ಎಫ್) ವಕ್ತಾರ ಗಿಂಜಾ ವುಲ್‌ಜಾಂಗ್ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಐಟಿಎಲ್‌ಎಫ್ ಈ ಆರೋಪವನ್ನು ತಳ್ಳಿಹಾಕಿದೆ.

ವ್ಯಾಪಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ 'ಶೂನ್ಯ ಎಫ್‌ಐಆರ್' ದಾಖಲಿಸಿದ ಮಣಿಪುರ ಪೊಲೀಸರು, ಇಂಫಾಲ್ ಉಪವಿಭಾಗದಲ್ಲಿ ಧರ್ಮ, ಜನಾಂಗ ಇತ್ಯಾದಿಗಳ ಆಧಾರದ ಮೇಲೆ ದ್ವೇಷ ಉತ್ತೇಜಿಸುವುದು, ಮಾನನಷ್ಟ, ವದಂತಿಗಳನ್ನು ಹರಡುವುದು ಸೇರಿದಂತೆ ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಎಫ್‌ಐಆರ್ ಅನ್ನು ತನಿಖೆಗಾಗಿ ನಂತರ ತಮೆಂಗ್‌ಲಾಂಗ್ ಜಿಲ್ಲೆಯ ಖಂಗ್‌ಶಾಂಗ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತಿದೆ.

ಬಹುಸಂಖ್ಯಾತ ಸಮುದಾಯವು ರೈಲುಗಳ ಮೂಲಕ ಕಣಿವೆಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದೆ ಎಂದು ವಲ್ಜಾಂಗ್ ಹೇಳಿಕೆ ನೀಡಿದ ನಂತರ ಖಾಂಗ್‌ಶಾಂಗ್ ರೈಲ್ವೆ ನಿಲ್ದಾಣದಲ್ಲಿ ತಮ್ಮ ಸರಕುಗಳನ್ನು ಲೂಟಿ ಮಾಡಬಹುದು ಎಂದು ಹೆದರಿದ ವ್ಯಾಪಾರಿಗಳು ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.