ಶೀಘ್ರದಲ್ಲೇ 'ಮೇರಿ ಮಾತಿ ಮೇರಾ ದೇಶ್' ಅಭಿಯಾನ: ಮನ್ ಕೀ ಬಾತ್ ನಲ್ಲಿ ಮೋದಿ ಘೋಷಣೆ
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲು ಶೀಘ್ರದಲ್ಲಿಯೇ 'ಮೇರಿ ಮಾತಿ ಮೇರಾ ದೇಶ್' ಅಭಿಯಾನ ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲು ಶೀಘ್ರದಲ್ಲಿಯೇ 'ಮೇರಿ ಮಾತಿ ಮೇರಾ ದೇಶ್' ಅಭಿಯಾನ ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕೀ ಬಾತ್ನ 103ನೇ ಆವೃತ್ತಿಯಲ್ಲಿ ಇಂದು ಮಾತನಾಡಿದ ಪ್ರಧಾನಿ, ಈ ಅಭಿಯಾನದಡಿ ಹುತಾತ್ಮರ ಸ್ಮರಣೆಗಾಗಿ ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ದಿಗ್ಗಜರ ಸ್ಮರಣಾರ್ಥ ದೇಶದ ಲಕ್ಷಗಟ್ಟಲೆ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಾಸನಗಳನ್ನು ಅಳವಡಿಸಲಾಗುವುದು ಎಂದರು.
ಮೇರಿ ಮಾತಿ ಮೇರಾ ದೇಶ್ ಅಭಿಯಾನದಡಿ ‘ಅಮೃತ್ ಕಲಶ ಯಾತ್ರೆಯ ಮಹತ್ವವನ್ನು ವಿವರಿಸಿದರು. ದೇಶದ ಮೂಲೆ ಮೂಲೆಯಿಂದ 7500 ಕಲಶಗಳಲ್ಲಿ ಮಣ್ಣು ಹೊತ್ತೊಯ್ಯುವ ಯಾತ್ರೆ ದೆಹಲಿಯಲ್ಲಿ ಮುಕ್ತಾಯವಾಗಲಿದೆ. ಈ ಯಾತ್ರೆ ವೇಳೆ ದೇಶದ ವಿವಿಧ ಭಾಗಗಳಿಂದ ಸಸಿಗಳನ್ನು ಕೊಂಡೊಯ್ಯಲಾಗುವುದು ಎಂದು ಅವರು ತಿಳಿಸಿದ್ದಾರೆ.
7500 ಕಲಶಗಳಲ್ಲಿ ಬರುವ ಮಣ್ಣು ಮತ್ತು ಸಸಿಗಳನ್ನು ಬೆಸೆಯುವ ಮೂಲಕ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ‘ಅಮೃತ ವಾಟಿಕಾ’ವನ್ನು ನಿರ್ಮಿಸಲಾಗುವುದು. ಈ 'ಅಮೃತ ವಾಟಿಕಾ' ಕೂಡ 'ಏಕ್ ಭಾರತ್ ಶ್ರೇಷ್ಠ್ ಭಾರತ್'ನ ಭವ್ಯ ಚಿಹ್ನೆ ಎಂದೂ ಪ್ರಧಾನಿ ಮೋದಿ ಹೇಳಿದರು.
ಇದಲ್ಲದೆ, ಈ ವರ್ಷ ಪ್ರವಾಹ ಮತ್ತು ಧಾರಾಕಾರ ಮಳೆಯಿಂದ ಹಾನಿಗೊಳಗಾದ ಹಲವಾರು ವ್ಯಕ್ತಿಗಳ ಜೀವಗಳನ್ನು ಉಳಿಸಿದ್ದಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿಯನ್ನು ಪ್ರಧಾನಿ ಶ್ಲಾಘಿಸಿದರು. ಮನ್ ಕೀ ಬಾತ್ನ 103 ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತವು ಡ್ರಗ್ಸ್ ವಿರುದ್ಧ ಭಾರಿ ಕ್ರಮ ಕೈಗೊಂಡಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


