ಉತ್ತರ ಪ್ರದೇಶ: ವ್ಯಕ್ತಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಮೂವರು ತೃತೀಯಲಿಂಗಿಗಳು ಸೇರಿ ಐವರ ಬಂಧನ
ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ತಲೆ ಬೋಳಿಸಿ ಮೂತ್ರ ಕುಡಿಸಿದ ಆರೋಪದ ಮೇಲೆ ಮೂವರು ತೃತೀಯಲಿಂಗಿಗಳು ಸೇರಿದಂತೆ ಐವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಸ್‌ಗಂಜ್: ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ತಲೆ ಬೋಳಿಸಿ ಮೂತ್ರ ಕುಡಿಸಿದ ಆರೋಪದ ಮೇಲೆ ಮೂವರು ತೃತೀಯಲಿಂಗಿಗಳು ಸೇರಿದಂತೆ ಐವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜುಲೈ 26 ರಂದು ಜಿಲ್ಲೆಯ ಸಹವರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಉದ್ದೇಶಿತ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಕ್ರಮ ಕೈಗೊಳ್ಳಲಾಗಿದೆ.
ಸಹವರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನಿಲ್ ಕುಮಾರ್ ಪ್ರಕಾರ, ಘಟನೆ ಕುರಿತು ರಫೀಕುಲ್ ಎಂದು ಗುರುತಿಸಲಾದ ವ್ಯಕ್ತಿ ದೂರು ದಾಖಲಿಸಿದ್ದಾರೆ.
ತೃತೀಯಲಿಂಗಿಯೊಬ್ಬರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ರಫೀಕುಲ್ ಇತರ ಮೂವರು ತೃತೀಯಲಿಂಗಿಗಳು ಮತ್ತು ಅವರ ಇಬ್ಬರು ಸಹಾಯಕರೊಂದಿಗೆ ವಿಚಾರವೊಂದಕ್ಕೆ ಬಿನ್ನಾಭಿಪ್ರಾಯಗಳನ್ನು ಹೊಂದಿದ್ದರು. ಹೀಗಾಗಿ, ಜುಲೈ 26ರಂದು ಅವರನ್ನು ನಿರ್ಜನ ಪ್ರದೇಶದಕ್ಕೆ ಕರೆದೊಯ್ದು ಥಳಿಸಿದ್ದಾರೆ.
ಇದನ್ನೂ ಓದಿ: ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ: ಆದಿವಾಸಿ ಯುವಕನ ಮೇಲೆ 'ಬಿಜೆಪಿ ವ್ಯಕ್ತಿ' ಮೂತ್ರ ವಿಸರ್ಜನೆ: ವಿಡಿಯೋ ವೈರಲ್
ಆರೋಪಿಗಳು ತನ್ನ ಬ್ಯಾಗಿನಲ್ಲಿಟ್ಟಿದ್ದ 10,000 ರೂ. ನಗದನ್ನು ದೋಚುವುದರೊಂದಿಗೆ ನನ್ನ ತಲೆ ಬೋಳಿಸಿ, ಮೂತ್ರ ಕುಡಿಸಿದ್ದರು ಎಂದು ಆರೋಪಿಸಿದ್ದಾರೆ.
ಅವರ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಶುಕ್ರವಾರ ಸಹಾವರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


