ಎರಡನೇ ಮಗುವಿಗೆ ಜನ್ಮ ನೀಡಿದ ಅಕಾಶ್ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ-ನೀತಾ ಅಂಬಾನಿ ಹಿರಿಯ ಮಗ ಅಕಾಶ್ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ ಎರಡನೇ ಮಗುವಿಗೆ ಜನ್ಮನೀಡಿದ್ದಾರೆ.

ಮುಂಬಯಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ-ನೀತಾ ಅಂಬಾನಿ ಹಿರಿಯ ಮಗ ಅಕಾಶ್ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ ಎರಡನೇ ಮಗುವಿಗೆ ಜನ್ಮನೀಡಿದ್ದಾರೆ.
ಈ ದಂಪತಿಗೆ ಮೇ 31, ಬುಧವಾರದಂದು ಹೆಣ್ಣು ಮಗು ಜನಿಸಿದೆ. ಅಕಾಶ್ ದಂಪತಿಗೆ ಈಗಾಗಲೇ ಒಂದು ಗಂಡು ಮಗುವಿದ್ದು, ಅದಕ್ಕೆ ಪೃಥ್ವಿ ಅಂಬಾನಿ ಎಂದು ಹೆಸರಿಟ್ಟಿದ್ದಾರೆ. ಇದೀಗ ಭಾರತದ ಶ್ರೀಮಂತ ಕುಟುಂಬವಾದ ಅಂಬಾನಿ ಪ್ಯಾಮಿಲಿಗೆ ಮತ್ತೊಂದು ಹೆಣ್ಣು ಮಗು ಜನಿಸಿದ್ದು, ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
ಆಕಾಶ್ ಅಂಬಾನಿ ಮತ್ತು ಶ್ಲೋಕಾ ಅಂಬಾನಿ 2019 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಶ್ಲೋಕಾ 2021 ರಲ್ಲಿ ತನ್ನ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಇದೀಗ ಆಕಾಶ್ ಮತ್ತು ಶ್ಲೋಕಾ ಮತ್ತೊಮ್ಮೆ ಪೋಷಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


