ದೇಶ

ಶೌಚಾಲಯಕ್ಕೆಂದು ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಕೀಟನಾಶಕ ಕುಡಿಸಿದ ದುಷ್ಕರ್ಮಿಗಳು

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದ ಸಂತ್ರಸ್ತೆ ಶೌಚಾಲಯಕ್ಕೆ ಹೋಗಲು ಮನೆಯಿಂದ ಹೊರಬಂದಾಗ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.

ಶೌಚಾಲಯಕ್ಕೆಂದು ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಕೀಟನಾಶಕ ಕುಡಿಸಿದ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
Published On :

ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದ ಸಂತ್ರಸ್ತೆ ಶೌಚಾಲಯಕ್ಕೆ ಹೋಗಲು ಮನೆಯಿಂದ ಹೊರಬಂದಾಗ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.

ಆರೋಪಿಗಳು ಆಕೆಯನ್ನು ಅಪಹರಿಸಿ ಆಕೆಯ ಮನೆಯಿಂದ ಸುಮಾರು 500 ಮೀಟರ್ ದೂರಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಕೃತ್ಯ ಎಸಗಿದ ಬಳಿಕ ಆಕೆಯ ಬಾಯಿಗೆ ಬಲವಂತವಾಗಿ ಕೀಟನಾಶಕ ಹಾಕಿದ್ದಾರೆ. ಮನೆಗೆ ಹಿಂತಿರುಗಿದ ನಂತರ, ಬಾಲಕಿ ತನ್ನ ಅಜ್ಜಿಯ ಬಳಿ ಕೃತ್ಯವನ್ನು ವಿವರಿಸಿದ್ದಾಳೆ.

'ಶೌಚಾಲಯಕ್ಕೆ ತೆರಳಲು ಬಾಲಕಿ ನನ್ನನ್ನು ಎಬ್ಬಿಸಲಿಲ್ಲ. ಈ ವೇಳೆ ಆರೋಪಿಗಳು ಆಕೆಯನ್ನು ಅಪಹರಿಸಿ ಮನೆಯಿಂದ ಕೆಲವೇ ಮೀಟರ್ ದೂರದಲ್ಲಿ ಅಮಾನುಷವಾಗಿ ದೌರ್ಜನ್ಯ ಎಸಗಿದ್ದಾರೆ. ಆರೋಪಿಗಳು ಆಕೆಯ ಫೋನ್‌ ಅನ್ನು ಸಹ ಕಿತ್ತುಕೊಂಡಿದ್ದಾರೆ.

ಮನೆಗೆ ಹಿಂದಿರುಗಿದಾಗ ಆಕೆ ಘಟನೆಯನ್ನು ವಿವರಿಸಿದಳು ಮತ್ತು ಆಕೆಯ ತಂದೆಗೆ ವಿಷಯ ತಿಳಿಸಲು ಹೇಳಿದಳು' ಎಂದು ಬಾಲಕಿಯ ಅಜ್ಜಿ ತಿಳಿಸಿದ್ದಾರೆ.

ಸಂತ್ರಸ್ತೆಯ ಪೋಷಕರು ಪಾಟ್ನಾದಲ್ಲಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಘಟನೆಯ ಸಮಯದಲ್ಲಿ ದೂರವಿದ್ದರು. ಮಾಹಿತಿ ಪಡೆದ ತಕ್ಷಣ ಮನೆಗೆ ಧಾವಿಸಿದರು.

ಸಂತ್ರಸ್ತೆಯನ್ನು ಮಹುವಾ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ವೈದ್ಯರು ಹಾಜಿಪುರದ ಸದರ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸಂತ್ರಸ್ತೆ ಸದ್ಯಕ್ಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ನಾವು ಬಾಳಿಗಾಂವ್ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕಾಯುತ್ತಿದ್ದೇವೆ. ನಾವು ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಬಾಳಿಗಾಂವ್ ಪೊಲೀಸ್ ಠಾಣೆಯ ಎಸ್‌ಐ ಪಲ್ಲವಿ ಕುಮಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.