ದೇಶ

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನ ಸಡೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನ ಸಡೆಬಡಿದ ಸೇನಾಪಡೆ
ಸಂಗ್ರಹ ಚಿತ್ರ
Published On :

ರಜೌರಿ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ರಜೌರಿ ಪ್ರದೇಶದ ದಸ್ಸಾಲ್ ಅರಣ್ಯದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಸ್ಥಳದಲ್ಲಿ ಎಷ್ಟು ಉಗ್ರರು ಅಡಗಿಕುಳಿತಿದ್ದಾರೆಂಬ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. ಸದ್ಯ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಮುಂದುವರಿಸಿವೆ. ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ರಜೌರಿ ಪ್ರದೇಶದ ದಸ್ಸಾಲ್ ಅರಣ್ಯದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದ್ದು, ಈ ಮಾಹಿತಿ ಆಧರಿಸಿ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು.

ಭದ್ರತಾ ಪಡೆಗಳು ಉಗ್ರರ ಅಡಗುತಾಣಗಳ ಬಳಿಗೆ ಹೋಗುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ ಭದ್ರತಾ ಪಡೆಗಳು ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.