ದೇಶ

ಒಡಿಶಾ ರೈಲು ದುರಂತ: ಹಳಿಗಳ ಮೇಲೆ ಹೆಣಗಳ ರಾಶಿ, ಗಾಯಾಳುಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆ; ಹೊರಗಡೆಯೇ ಚಿಕಿತ್ಸೆ

ಭೀಕರ ದುರಂತದಲ್ಲಿ ಸುಮಾರು 233 ಮಂದಿ ಸಾವನ್ನಪ್ಪಿರುವುದರಿಂದ ರೈಲು ಹಳಿಗಳ ಮೇಲೆ ಹೆಣಗಳ ರಾಶಿಯೇ ಬಿದ್ದಿದೆ. ರೈಲ್ವೆ ಬೋಗಿಗಳು ಒಂದರ ಮೇಲೆ ಒಂದು ಬಿದ್ದಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕ್ಲಿಷ್ಟಕರವಾಗಿದೆ.

ಒಡಿಶಾ ರೈಲು ದುರಂತ: ಹಳಿಗಳ ಮೇಲೆ ಹೆಣಗಳ ರಾಶಿ, ಗಾಯಾಳುಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆ; ಹೊರಗಡೆಯೇ ಚಿಕಿತ್ಸೆ
ಗಾಯಾಳುವನ್ನು ಆಸ್ಪತ್ರೆಗೆ ರವಾನಿಸುತ್ತಿರುವುದು
Published On :

ಭುವನೇಶ್ವರ್: ಕೋರಮಂಡಲ್‌ ಎಕ್ಸ್‌ಪ್ರೆಸ್‌, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ಸ್ಥಳದಿಂದ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಸಾಗಿಸಲು 115 ಆಂಬ್ಯುಲೆನ್ಸ್‌ಗಳು ಮತ್ತು 50 ಬಸ್‌ಗಳು  ಹರಸಾಹಸ ಪಟ್ಟವು. ಗಾಯಾಳುಗಳಿಂದ ಆಸ್ಪತ್ರೆ ತುಂಬಿ ತುಳುಕುತ್ತಿರವ ಕಾರಣ ಬಾಲಸೋರ್‌ನ ಜಿಲ್ಲಾ ಕೇಂದ್ರ ಆಸ್ಪತ್ರೆಯ ಹೊರಗೆ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯ ಗಾಯಾಳುಗಳನ್ನು ಭದ್ರಕ್ ಜಿಲ್ಲೆಗೆ ರವಾನಿಸಲಾಗಿದೆ.

ಕಾರ್ಯಾಚರಣೆಗಾಗಿ ಸುಮಾರು 600-700 ಸಿಬ್ಬಂದಿಯನ್ನು ಸರ್ಕಾರಿ ಸಂಸ್ಥೆಗಳು ಮತ್ತು ಸ್ಥಳೀಯ ಆಡಳಿತಗಳು ನಿಯೋಜಿಸಿವೆ. ಆದಾಗ್ಯೂ, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ರಕ್ಷಣಾ ತಂಡಗಳಿಗೆ ಅಗತ್ಯವಿರುವ ಆಂಬ್ಯುಲೆನ್ಸ್‌ಗಳು ಕೊರತೆ ಕಂಡು ಬಂತು, ಸಹಾಯಕ್ಕಾಗಿ ಬಸ್‌ಗಳು ಮತ್ತು ಇತರ ವಾಹನಗಳನ್ನು ಕಳುಹಿಸಲು ಸರ್ಕಾರ ನಿರ್ಧರಿಸಿದೆ.

50 ಆ್ಯಂಬುಲೆನ್ಸ್ ಗಳಿದ್ದರೂ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಸಾಕಾಗಲಿಲ್ಲ. ಹೀಗಾಗಿ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಸಜ್ಜುಗೊಳಿಸಲಾಗುತ್ತಿದೆ ”ಎಂದು ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಟ್ವೀಟ್ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿ, ಹಲವಾರು ಪ್ರಯಾಣಿಕರಿಗೆ ಚಿಕಿತ್ಸೆಯ ಅಗತ್ಯವಿರುವುದರಿಂದ ರಕ್ತದ ಕೊರತೆ ಕಂಡುಬಂದಿದೆ.

ಭೀಕರ ದುರಂತದಲ್ಲಿ ಸುಮಾರು 233 ಮಂದಿ  ಸಾವನ್ನಪ್ಪಿರುವುದರಿಂದ ರೈಲು ಹಳಿಗಳ ಮೇಲೆ ಹೆಣಗಳ ರಾಶಿಯೇ ಬಿದ್ದಿದೆ. ರೈಲ್ವೆ ಬೋಗಿಗಳು ಒಂದರ ಮೇಲೆ ಒಂದು ಬಿದ್ದಿರುವುದರಿಂದ ರಕ್ಷಣಾ ಕಾರ್ಯಾಚರಣೆ ಕ್ಲಿಷ್ಟಕರವಾಗಿದೆ.  ಭಾರ ಎತ್ತುವ ಸಲುವಾಗಿ ಕ್ರೇನ್‌ಗಳನ್ನು ತರಿಸಲಾಗಿದೆ. ಕತ್ತಲಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕುಂಟಾಗಿದೆ ಎಂದು ತಿಳಿದು ಬಂದಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.