ದೇಶ

ಬಾಲಸೋರ್ ರೈಲು ದುರಂತ: ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿ, ಘಟನಾ ಸ್ಥಳಕ್ಕೆ ಭೇಟಿ

ಒಡಿಶಾದ ಬಾಲಸೋರ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತುರ್ತು ಸಭೆ ನಡೆಸುತ್ತಿರುವ ಪ್ರಧಾನಿ ಮೋದಿಯವರು, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಬಾಲಸೋರ್ ರೈಲು ದುರಂತ: ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಪ್ರಧಾನಿ ಮೋದಿ, ಘಟನಾ ಸ್ಥಳಕ್ಕೆ ಭೇಟಿ
ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಪ್ರಧಾನಿ ಮೋದಿ.
Published On :

ನವದೆಹಲಿ: ಒಡಿಶಾದ ಬಾಲಸೋರ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತುರ್ತು ಸಭೆ ನಡೆಸುತ್ತಿರುವ ಪ್ರಧಾನಿ ಮೋದಿಯವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೇ ಸಚಿವಾಲಯ ಮುಖ್ಯಸ್ಥರು ಉಪಸ್ಥಿತರಿದ್ದರು,

ಲಭ್ಯವಿರುವ ದಾಖಲೆಗಳ ಪ್ರಕಾರ ಭಾರತದಲ್ಲಿ ನಡೆದ ನಾಲ್ಕನೇ ಮಾರಣಾಂತಿಕ ರೈಲು ಅಪಘಾತ ಇದಾಗಿದೆ. ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ 170 ಕಿಮೀ ಉತ್ತರಕ್ಕೆ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ 7 ಗಂಟೆಗೆ ಈ ಅಪಘಾತ ಸಂಭವಿಸಿದೆ. ರೈಲ್ವೆ ಸಚಿವಾಲಯವು ತನಿಖೆಗೆ ಆದೇಶ ಹೊರಡಿಸಿದೆ.

ವರದಿಯ ಪ್ರಕಾರ, ಪ್ರಧಾನಿ ಮೋದಿ ಮೊದಲು ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ ಗಾಯಾಳುಗಳು ದಾಖಲಾಗಿರುವ ಕಟಕ್‌ ನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಕೋರಮಂಡಲ್‌ ಎಕ್ಸ್‌ಪ್ರೆಸ್‌, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.