ಪರಿಸರ, ಹವಾಮಾನ ಬದಲಾವಣೆ ಬಗ್ಗೆ ಸ್ಪಷ್ಟ ಮಾರ್ಗಸೂಚಿಯೊಂದಿಗೆ ಭಾರತ ಮುನ್ನಡೆಯುತ್ತಿದೆ: ಪ್ರಧಾನಿ ಮೋದಿ
ಸದ್ಯದ ಅಗತ್ಯತೆಗಳು ಮತ್ತು ಭವಿಷ್ಯದ ದೃಷ್ಟಿಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದರೊಂದಿಗೆ ಭಾರತವು ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಗೆ ಸ್ಪಷ್ಟ ಮಾರ್ಗಸೂಚಿಯೊಂದಿಗೆ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ನವದೆಹಲಿ: ಸದ್ಯದ ಅಗತ್ಯತೆಗಳು ಮತ್ತು ಭವಿಷ್ಯದ ದೃಷ್ಟಿಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದರೊಂದಿಗೆ ಭಾರತವು ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಗೆ ಸ್ಪಷ್ಟ ಮಾರ್ಗಸೂಚಿಯೊಂದಿಗೆ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವು ಒಂದೆಡೆ ತನ್ನ 4G ಮತ್ತು 5G ಟೆಲಿಕಾಂ ನೆಟ್‌ವರ್ಕ್‌ಗಳನ್ನು ವಿಸ್ತರಿಸಿದರೆ, ಮತ್ತೊಂದೆಡೆ ಅದು ತನ್ನ ಅರಣ್ಯ ವ್ಯಾಪ್ತಿಯನ್ನು ಸಹ ಸಮಾನವಾಗಿ ಹೆಚ್ಚಿಸಿದೆ ಎಂದು ತಿಳಿಸಿದರು.
ಈ ವರ್ಷದ ವಿಶ್ವ ಪರಿಸರ ದಿನದ ವಿಷಯವೆಂದರೆ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ತೊಡೆದುಹಾಕುವುದು. ಈ ವಿಷಯದ ಬಗ್ಗೆ ಇಂದು ಜಗತ್ತು ಮಾತನಾಡುತ್ತಿದೆ. ಆದರೆ, ಭಾರತವು ಕಳೆದ ನಾಲ್ಕೈದು ವರ್ಷಗಳಿಂದ ಸತತವಾಗಿ ಈ ಕಾರ್ಯನಿರ್ವಹಿಸುತ್ತಿದೆ.
'2018 ರಲ್ಲಿ ಭಾರತವು ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ತೊಡೆದುಹಾಕಲು ಎರಡು ಹಂತಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸಿತು. ಒಂದೆಡೆ, ನಾವು ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದೇವೆ ಮತ್ತು ಇನ್ನೊಂದೆಡೆ ನಾವು ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಯನ್ನು ಕಡ್ಡಾಯಗೊಳಿಸಿದ್ದೇವೆ' ಎಂದು ಅವರು ಹೇಳಿದರು.
ಭಾರತವು ತನ್ನ ಬೆಳವಣಿಗೆಗೆ ಇತರ ವಿಚಾರಗಳಂತೆ ಪರಿಸರದ ಕುರಿತಾಗಿಯೂ ದೊಡ್ಡ ರೀತಿಯಲ್ಲಿ ಗಮನಹರಿಸುತ್ತಿದೆ. ಒಂದೆಡೆ ಬಡವರಿಗೆ ನೆರವು ನೀಡಿದರೆ, ಮತ್ತೊಂದೆಡೆ ಭವಿಷ್ಯದ ಇಂಧನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು 'ಹಸಿರು ಮತ್ತು ಶುದ್ಧ ಇಂಧನ'ದ ಮೇಲೆ ಹೆಚ್ಚು ಗಮನಹರಿಸಿದೆ ಎಂದು ಮೋದಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


