ಒಡಿಶಾ ರೈಲು ದುರಂತ: ಇನ್ನೂ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ!
275 ಮಂದಿಯ ಸಾವಿಗೆ ಕಾರಣವಾಗಿರುವ ಒಡಿಶಾ ರೈಲು ದುರಂತ ಸಂಭವಿಸಿ 4 ದಿನಗಳೇ ಕಳೆದರೂ ಇನ್ನೂ 101 ಮೃತದೇಹಗಳ ಗುರುತೇ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಾಸೋರ್: 275 ಮಂದಿಯ ಸಾವಿಗೆ ಕಾರಣವಾಗಿರುವ ಒಡಿಶಾ ರೈಲು ದುರಂತ ಸಂಭವಿಸಿ 4 ದಿನಗಳೇ ಕಳೆದರೂ ಇನ್ನೂ 101 ಮೃತದೇಹಗಳ ಗುರುತೇ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಡಿಶಾದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ನಂತರ, ಕನಿಷ್ಠ 275 ಮಂದಿ ಸಾವನ್ನಪ್ಪಿದ್ದು, 1000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಗುರುತು ಪತ್ತೆಕಾರ್ಯ ಚಾಲನೆಯಲ್ಲಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.
ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಅವರು ಈ ಬಗ್ಗೆ ಮಾತನಾಡಿದ್ದು, 'ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಜನರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ, ಅದರಲ್ಲಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 278 ಜನರ ಪೈಕಿ 101 ಮೃತದೇಹಗಳು ಇನ್ನೂ ಉಳಿದಿವೆ. ಅವುಗಳ ಗುರುತು ಪತ್ತೆ ಕಾರ್ಯ ಚಾಲ್ತಿಯಲ್ಲಿದೆ" ಎಂದು ರಾಯ್ ತಿಳಿಸಿದರು.
"ಭುವನೇಶ್ವರದಲ್ಲಿ ಇರಿಸಲಾಗಿರುವ ಒಟ್ಟು 193 ಶವಗಳಲ್ಲಿ 80 ಶವಗಳನ್ನು ಗುರುತಿಸಲಾಗಿದೆ. 55 ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಿಎಂಸಿಯ ಸಹಾಯವಾಣಿ ಸಂಖ್ಯೆಗೆ 200 ಕ್ಕೂ ಹೆಚ್ಚು ಕರೆಗಳು ಬಂದಿವೆ. 129 ಮೃತ ದೇಹಗಳನ್ನು ಗುರುತಿಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತಿದೆ ಎಂದು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ಆಯುಕ್ತ ವಿಜಯ್ ಅಮೃತ್ ಕುಲಂಗೆ ತಿಳಿಸಿದ್ದಾರೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


