ಆಂಧ್ರ ಪ್ರದೇಶದಲ್ಲಿ ಟ್ರಕ್ ಪಲ್ಟಿ; ಕೆಳಗೆ ಬಿದ್ದ ಬಿಯರ್ ಬಾಟಲಿಗಳನ್ನು ಕದ್ದೊಯ್ದ ಜನರು
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಮದ್ಯದ ಬಾಟಲಿಗಳಿದ್ದ ಕೇಸ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ನಂತರ ಜನರು ಬಿಯರ್ ಬಾಟಲಿಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಅನಕಾಪಲ್ಲಿ ಮತ್ತು ಬಯ್ಯವರಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಮದ್ಯದ ಬಾಟಲಿಗಳಿದ್ದ ಕೇಸ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ನಂತರ ಜನರು ಬಿಯರ್ ಬಾಟಲಿಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ.
ಅನಕಾಪಲ್ಲಿ ಮತ್ತು ಬಯ್ಯವರಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.
ಟ್ರಕ್ ಪಲ್ಟಿಯಾದ ಬಳಿಕ 200 ಬಿಯರ್ ಬಾಟಲಿಗಳ ಸಂಪೂರ್ಣ ಲೋಡ್ ನೆಲದ ಮೇಲೆ ಬಿದ್ದಿದ್ದರಿಂದ, ಸ್ಥಳೀಯರು ಲಾರಿ ಚಾಲಕ ಮತ್ತು ಕ್ಲೀನರ್ಗೆ ಸಹಾಯ ಮಾಡುವ ಬದಲು ಅವುಗಳನ್ನು ಕದಿಯುವಲ್ಲಿ ನಿರತರಾಗಿದ್ದರು. ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮದ್ಯ ಸಾಗಿಸುವ ಟ್ರಕ್ಗಳು ರಸ್ತೆ ಅಪಘಾತಕ್ಕೀಡಾದ ಬಳಿಕ ಅದರಲ್ಲಿದ್ದ ಮದ್ಯದ ಬಾಟಲಿಗಳನ್ನು ಕದಿಯುವ ಇಂತಹ ಘಟನೆಗಳು ರಾಜ್ಯದಲ್ಲಿ ಈ ಹಿಂದೆಯೂ ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


