ತ್ರಿವಳಿ ರೈಲು ಅಪಘಾತ: ಪಶ್ಚಿಮ ಬಂಗಾಳದ ಶಾಲಿಮಾರ್‌ನಿಂದ ಚೆನ್ನೈಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಪ್ರಯಾಣ
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.

ಹೌರಾ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.
ಜೂನ್ 2 ರಂದು ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಅದಾದ ನಂತರ ರೈಲು ತನ್ನ ಸೇವೆಗಳನ್ನು ಪುನರಾರಂಭಿಸುತ್ತಿರುವುದು ಇದೇ ಮೊದಲು. ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಸಂಭವಿಸಿದ ಅಪಘಾತದಲ್ಲಿ 288 ಜನರು ಸಾವಿಗೀಡಾಗಿದ್ದರು.
ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆಯಿತು. ಈ ವೇಳೆ ಹಲವಾರು ಬೋಗಿಗಳು ಹಳಿತಪ್ಪಿದವು. ಬಳಿಕ ಬೆಂಗಳೂರಿನ ಯಶವಂತಪುರದಿಂದ ಬರುತ್ತಿದ್ದ ಹೌರಾ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು.
ಸೋಮವಾರ, ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಸೇವೆಗಳು ಪುನರಾರಂಭಗೊಂಡ ನಂತರ ಹೌರಾ-ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್‌ನಲ್ಲಿ ಪುನಃಸ್ಥಾಪಿಸಲಾದ ರೈಲ್ವೆ ಹಳಿಯನ್ನು ದಾಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


