ರಷ್ಯಾದಲ್ಲಿ ಸಿಕ್ಕಿಬಿದ್ದ ಅಮೆರಿಕಾ ಪ್ರಯಾಣಿಕರು: ಸುರಕ್ಷಿತವಾಗಿ ಕರೆತರಲು ಹೊರಟ ಏರ್ ಇಂಡಿಯಾ ವಿಮಾನ!
ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಏರ್ ಇಂಡಿಯಾದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನವಾದ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಏರ್‌ಲೈನ್‌ನ ಎರಡನೇ ವಿಮಾನವು ರಷ್ಯಾಗೆ ತಲುಪಿದೆ.

ನವದೆಹಲಿ: ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಏರ್ ಇಂಡಿಯಾದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನವಾದ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಏರ್‌ಲೈನ್‌ನ ಎರಡನೇ ವಿಮಾನವು ರಷ್ಯಾಗೆ ತಲುಪಿದೆ.
ಬುಧವಾರ ಮಧ್ಯಾಹ್ನ 3:21ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಏರ್ ಇಂಡಿಯಾ ವಿಮಾನ ಗುರುವಾರ ಬೆಳಗ್ಗೆ 6:14ಕ್ಕೆ ಮುಂಬೈನಿಂದ ಮಗದನ್‌ಗೆ ರಷ್ಯಾ ತಲುಪಿತು. ಏರ್ ಇಂಡಿಯಾ ವಿಮಾನ AI195 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತು ಮಗದನ್ ನಿಂದ ಹೊರಟಿದೆ ಎಂಬ ಸುದ್ದಿ ಬಂದಿದೆ.
ವಿಮಾನವು ಸ್ಥಳೀಯ ಸಮಯ ಬೆಳಿಗ್ಗೆ 6:14 ಕ್ಕೆ ಆಗಮಿಸಿತು. 10:27ಕ್ಕೆ ಹೊರಟಿದೆ. ಅಲ್ಲದೆ 00:15ಕ್ಕೆ ಸ್ಯಾನ್ ಫ್ರಾನ್ಸಿಸ್ಕೋ ತಲುಪುವ ನಿರೀಕ್ಷೆಯಿದೆ. ಸ್ಯಾನ್ ಫ್ರಾನ್ಸಿಸ್ಕೋಗೆ ಆಗಮಿಸಿದ ನಂತರ, ಏರ್ ಇಂಡಿಯಾ ಪ್ರಯಾಣಿಕರಿಗೆ ವೈದ್ಯಕೀಯ ಆರೈಕೆ, ನೆಲದ ಸಾರಿಗೆ ಮತ್ತು ಮುಂದಿನ ಗಮ್ಯಸ್ಥಾನ ಸೇರಿದಂತೆ ಅಗತ್ಯ ಸಹಾಯವನ್ನು ಒದಗಿಸಲಾಗುತ್ತದೆ.
ಏರ್ ಇಂಡಿಯಾ ವಿಮಾನ ಸಂಖ್ಯೆ AI-173 ಜೂನ್ 6ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿತ್ತು. ಆದರೆ ಮಧ್ಯದಲ್ಲಿ, ಬೋಯಿಂಗ್ -777 ವಿಮಾನದ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾಗಿತ್ತು. ಹೀಗಾಗಿ ವಿಮಾನ ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಈ ವಿಮಾನದಲ್ಲಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿ ಇದ್ದರು. ಅದೇ ಸಮಯದಲ್ಲಿ, ರಷ್ಯಾದಲ್ಲಿ ಸಿಲುಕಿರುವ ಏರ್ ಇಂಡಿಯಾ ವಿಮಾನದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಆಹಾರ ಮತ್ತು ಇತರ ಸೌಲಭ್ಯಗಳನ್ನು ಕಳುಹಿಸಲಾಗಿದೆ ಎಂದು ಕಂಪನಿಯು ಹೇಳಿಕೆಯನ್ನು ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


