ದೇಶ

13ರ ಬಾಲಕಿ ಮೇಲೆ ಅತ್ಯಾಚಾರ, ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಪೋಸ್ಟ್: ಭೋಜ್‌ಪುರಿ ಗಾಯಕನ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಚಿತ್ರಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 21 ವರ್ಷದ ಭೋಜ್‌ಪುರಿ ಗಾಯಕನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

13ರ ಬಾಲಕಿ ಮೇಲೆ ಅತ್ಯಾಚಾರ, ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಪೋಸ್ಟ್: ಭೋಜ್‌ಪುರಿ ಗಾಯಕನ ಬಂಧನ
ಸಾಂದರ್ಭಿಕ ಚಿತ್ರ
Published On :

ಗುರುಗ್ರಾಮ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಚಿತ್ರಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 21 ವರ್ಷದ ಭೋಜ್‌ಪುರಿ ಗಾಯಕನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಿಹಾರ ಮೂಲದ ಅಭಿಷೇಕ್ (21) ಎಂದು ಗುರುತಿಸಲಾಗಿದ್ದು, ಆತ ಭೋಜ್‌ಪುರಿ ಗಾಯಕ ಬಾಬುಲ್ ಬಿಹಾರಿ ಎಂದೂ ಖ್ಯಾತನಾಗಿದ್ದ ಎಂದು ಹೇಳಲಾಗಿದೆ. ಆತ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ 27,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯು ಎರಡು ವರ್ಷಗಳ ಹಿಂದೆ ರಾಜೀವ್ ನಗರ ಪ್ರದೇಶದಲ್ಲಿ ವಾಸವಾಗಿದ್ದ 13 ವರ್ಷದ ಬಾಲಕಿಗೆ ಆಮಿಷ ಒಡ್ಡಿದ್ದ. ಆಕೆಯೊಂದಿಗೆ ಸ್ನೇಹ ಬೆಳೆಸಿ ಬಳಿಕ ಆಕೆಯನ್ನು ಹೋಟೆಲ್ ರೂಮಿಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆಯ ಚಿತ್ರಗಳನ್ನು ತೆಗೆದಿದ್ದಾನೆ. ಘಟನೆಯ ನಂತರ ಅಪ್ರಾಪ್ತ ಬಾಲಕಿ ಆರೋಪಿಯಿಂದ ದೂರ ಉಳಿದಿದ್ದು, ಆತನ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಆರೋಪಿಯು ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯ ಚಿತ್ರಗಳನ್ನು ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಆ ಚಿತ್ರಗಳನ್ನು ನೋಡಿದ ನಂತರ, ಸಂತ್ರಸ್ತೆಯ ಕುಟುಂಬದವರು ಬಾಲಕಿಯನ್ನು ಪ್ರಶ್ನಿಸಿದ್ದು, ನಂತರ ಆಕೆ ತನ್ನೊಂದಿಗಾದ ಘಟನೆಯನ್ನು ವಿವರಿಸಿದ್ದಾಳೆ. ಬಳಿಕ ಕುಟುಂಬದವರು ಬುಧವಾರ ಆಕೆಯನ್ನು ಪೊಲೀಸರ ಬಳಿ ಕರೆದೊಯ್ದಿದ್ದಾರೆ. ಸಂತ್ರಸ್ತೆಗೆ ಕೌನ್ಸಿಲಿಂಗ್ ಮಾಡಿದ ನಂತರ, ಆರೋಪಿಯ ವಿರುದ್ಧ ಸೆಕ್ಟರ್ 14 ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ದೂರಿನ ಅನ್ವಯ ಎಫ್‌ಐಆರ್‌ ದಾಖಲಿಸಿಕೊಂಡು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ವಕ್ತಾರ ಸುಭಾಷ್‌ ಬೊಕೆನ್‌ ತಿಳಿಸಿದ್ದಾರೆ.

"ಆರೋಪಿಯನ್ನು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,  ಇಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.