2024ರ ಲೋಕಸಭೆ ಚುನಾವಣೆ: ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಬಿಎಸ್‌ಪಿ ನಿರ್ಧಾರ
ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.

ಲಖನೌ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿದ ಬಳಿಕ ದೇಶದ ವಿರೋಧ ಪಕ್ಷಗಳಲ್ಲಿ ಹೊಸ ಹುರುಪು ಮೂಡಿದ್ದು, ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಪಣತೊಟ್ಟಿವೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಪಕ್ಷಗಳನ್ನೆಲ್ಲಾ ಒಟ್ಟಿಗೆ ಸೇರಿಸುವ ನೇತೃತ್ವ ವಹಿಸಿದ್ದಾರೆ.
ಬಿಎಸ್‌ಪಿ ಪಕ್ಷವು ಯಾವುದೇ ವಿರೋಧ ಪಕ್ಷದ ಮೈತ್ರಿಗೆ ಸೇರುವುದಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ.
ಬಿಎಸ್‌ಪಿಯ ಹಿರಿಯ ನಾಯಕ ಭೀಮರಾವ್ ಅಂಬೇಡ್ಕರ್ ಮಾತನಾಡಿ, '2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ಹೋರಾಡಲು ವಿರೋಧ ಪಕ್ಷಗಳಿಗೆ ಅಡಿಪಾಯ ಸಿದ್ಧಪಡಿಸಲು ಪ್ರತಿಪಕ್ಷಗಳ ನಾಯಕರು ವಿವಿಧ ರಾಜ್ಯಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಹಲವಾರು ಸುತ್ತಿನ ಸಭೆಗಳ ನಂತರವೂ ವಿರೋಧ ಪಕ್ಷದಿಂದ ಯಾರು ಪ್ರಧಾನಿ ಅಭ್ಯರ್ಥಿಯಾಗುತ್ತಾರೆ ಎಂಬುದು ಸ್ಪಷ್ಟವಾಗಿಲ್ಲ' ಎಂದಿದ್ದಾರೆ.
ಆದರೆ, ಬಿಎಸ್‌ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.
ಬಿಎಸ್‌ಪಿ ಇತರ ರಾಜಕೀಯ ಪಕ್ಷಗಳ ಅನುಯಾಯಿಯಲ್ಲ. ಆದರೆ, ಅದು ಸಿದ್ಧಾಂತ ಮತ್ತು ಕೇಡರ್ ಆಧಾರಿತ ಪಕ್ಷವಾಗಿದೆ ಎಂದು ಅಂಬೇಡ್ಕರ್ ತಿಳಿಸಿದರು.
ಮಾಯಾವತಿ ಅವರು ದೇಶದಾದ್ಯಂತ ದಲಿತರ ಬೆಂಬಲವನ್ನು ಹೊಂದಿದ್ದಾರೆ ಮತ್ತು ಕಠಿಣ ಮತ್ತು ಸಮರ್ಥ ಆಡಳಿತಗಾರ್ತಿ ಎಂಬ ಇಮೇಜ್ ಹೊಂದಿದ್ದಾರೆ ಎಂದು ಬಿಎಸ್ಪಿ ಪದಾಧಿಕಾರಿಗಳು ಹೇಳಿದ್ದಾರೆ.
ಮಾಯಾವತಿ ಅವರು ಪ್ರಧಾನಿ ಅಭ್ಯರ್ಥಿಯಾದ ನಂತರ ಬಿಜೆಪಿಗೆ ತೆರಳಿರುವ ದಲಿತರು ಮತ್ತೆ ಬಿಎಸ್‌ಪಿಗೆ ಮರಳುತ್ತಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


