ಎಐಎಡಿಎಂಕೆ ಮಾಜಿ ನಾಯಕ ಮೈತ್ರೇಯನ್ ಬಿಜೆಪಿ ಸೇರ್ಪಡೆ
ಕಳೆದ ವರ್ಷ ಎಐಎಡಿಎಂಕೆಯಿಂದ ಉಚ್ಛಾಟಿತರಾಗಿದ್ದ ಮಾಜಿ ರಾಜ್ಯಸಭಾ ಸದಸ್ಯ ವಿ ಮೈತ್ರೇಯನ್ ಅವರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ನವದೆಹಲಿ: ಕಳೆದ ವರ್ಷ ಎಐಎಡಿಎಂಕೆಯಿಂದ ಉಚ್ಛಾಟಿತರಾಗಿದ್ದ ಮಾಜಿ ರಾಜ್ಯಸಭಾ ಸದಸ್ಯ ವಿ ಮೈತ್ರೇಯನ್ ಅವರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್ ಮತ್ತು ಸಿ ಟಿ ರವಿ ಅವರ ಸಮ್ಮುಖದಲ್ಲಿ ಮೈತ್ರೇಯನ್ ಅವರು ಕೇಸರಿ ಪಕ್ಷಕ್ಕೆ ಸೇರ್ಪಡೆಯಾದರು.
ಬಳಿಕ ಮಾತನಾಡಿದ ಮೈತ್ರೇಯನ್ ಅವರು, 2024ರ ಲೋಕಸಭೆ ಮತ್ತು 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎರಡು ದಶಕಗಳ ಹಿಂದೆ ಎಐಎಡಿಎಂಕೆ ಸೇರುವ ಮೊದಲು ಬಿಜೆಪಿಯಲ್ಲಿದ್ದ ಮೈತ್ರೇಯನ್ ಅವರು ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ಜಯಲಲಿತಾ ಅವರ ಆಪ್ತ ಸಹಾಯಕ ಎಂದು ಪರಿಗಣಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


