ಮಧ್ಯಪ್ರದೇಶ: ಹಳೆಯ ವಿವಾದಕ್ಕೆ 2 ಕುಟುಂಬಗಳ ನಡುವೆ ಘರ್ಷಣೆ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ
ಹಳೆಯ ವಿವಾದಕ್ಕೆ 2 ಕುಟುಂಬಗಳ ನಡುವೆ ಘರ್ಷಣೆ ಉಂಟಾಗಿದ್ದು, ಇಬ್ಬರು ಸಾವನ್ನಪ್ಪಿ ಓರ್ವನಿಗೆ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ವರದಿಯಾಗಿದೆ.

ಭೋಪಾಲ್: ಹಳೆಯ ವಿವಾದಕ್ಕೆ 2 ಕುಟುಂಬಗಳ ನಡುವೆ ಘರ್ಷಣೆ ಉಂಟಾಗಿದ್ದು, ಇಬ್ಬರು ಸಾವನ್ನಪ್ಪಿ ಓರ್ವನಿಗೆ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ದಿವಾಸ್ ಜಿಲ್ಲೆಯಲ್ಲಿ ವರದಿಯಾಗಿದೆ.
ಘಟನೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಗೊಲಾ ಗುತನ್ ಗ್ರಾಮದಲ್ಲಿ ಗೋದಾರ ಮತ್ತು ದೇದಾದ್ ಕುಟುಂಬಗಳ ನಡುವೆ ಈ ಘರ್ಷಣೆ ನಡೆದಿದ್ದು, ಸತ್ವಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಸಂಪತ್ ಉಪಾಧ್ಯಾಯ ತಿಳಿಸಿದ್ದಾರೆ.
ಗೋದಾರ ಕುಟುಂಬದ ಮೂವರು ವ್ಯಕ್ತಿಗಳಿಗೆ ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ರಾಜೇಶ್ ಗೋದಾರ ಮತ್ತು ಕೈಲಾಸ ಗೋದಾರ ಸಾವನ್ನಪ್ಪಿದ್ದಾರೆ. ಕಾನೂನು ಸುವ್ಯವಸ್ಥೆ ನಿರ್ವಹಿಸಲು ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ.
ಗುಂಡಿನ ದಾಳಿ ಮತ್ತು ಸಾವುಗಳಿಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಮತ್ತು ಘರ್ಷಣೆಗೆ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಮೃತ ಕೈಲಾಶ್ ಗೋದಾರ ಭಾರತೀಯ ಜನತಾ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಗೋದಾರ ಅವರ ತಂದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


