MSPಗೆ ಆಗ್ರಹಿಸಿ ರೈತರ ಪ್ರತಿಭಟನೆಯಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಭಾಗಿ
ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಪಿಪ್ಲಿಯಲ್ಲಿ ಸೂರ್ಯಕಾಂತಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಇತರ ಬೇಡಿಕೆಗಳಿಗೆ ಒತ್ತಾಯಿಸಿ ಸೋಮವಾರ ರೈತರು ನಡೆಸುತ್ತಿರುವ ಮಹಾಪಂಚಾಯತ್‌ನಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್...

ಕುರುಕ್ಷೇತ್ರ: ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಪಿಪ್ಲಿಯಲ್ಲಿ ಸೂರ್ಯಕಾಂತಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಇತರ ಬೇಡಿಕೆಗಳಿಗೆ ಒತ್ತಾಯಿಸಿ ಸೋಮವಾರ ರೈತರು ನಡೆಸುತ್ತಿರುವ ಮಹಾಪಂಚಾಯತ್‌ನಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರು ಭಾಗವಹಿಸಿದ್ದಾರೆ.
ವಿವಿಧ ರೈತ ಸಂಘಗಳ ನಾಯಕರು ಮತ್ತು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಕುಸ್ತಿಪಟು ಬಜರಂಗ್ ಪುನಿಯಾ ಅವರು ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದಾರೆ.
"ನಾವು ರೈತರನ್ನು ಬೆಂಬಲಿಸಲು ಇಲ್ಲಿಗೆ ಬಂದಿದ್ದೇವೆ. ನಾವು ರೈತ ಕುಟುಂಬದಿಂದ ಬಂದಿದ್ದೇವೆ. ನಾವು ರಸ್ತೆಯಲ್ಲಿ ನಿಂತಿರುವ ರೈತರೊಂದಿಗೆ ನಾವು ನಿಲ್ಲುತ್ತೇವೆ. ರೈತರ ಪ್ರತಿಭಟನೆಯ ಸಂದರ್ಭದಲ್ಲೂ ನಾವು ರೈತರಿಗೆ ಬೆಂಬಲ ನೀಡಿದ್ದೇವೆ ಮತ್ತು ನಾವು ಅವರನ್ನು ಬೆಂಬಲಿಸುತ್ತೇವೆ" ಎಂದು ಬಜರಂಗ್ ಪುನಿಯಾ ಅವರು ಹೇಳಿದ್ದಾರೆ.
ಭಾರತೀಯ ಕಿಸಾನ್ ಯೂನಿಯನ್(ಚಾರುಣಿ) ಕರೆ ನೀಡಿರುವ "ಎಂಎಸ್‌ಪಿ ದಿಲಾವೋ, ಕಿಸಾನ್ ಬಚಾವೋ ಮಹಾಪಂಚಾಯತ್" ರಾಷ್ಟ್ರೀಯ ಹೆದ್ದಾರಿ-44 ರ ಸಮೀಪವಿರುವ ಪಿಪ್ಲಿಯ ಧಾನ್ಯ ಮಾರುಕಟ್ಟೆಯಲ್ಲಿ ನಡೆಯುತ್ತಿದೆ.
"ನಾವು ಹೆದ್ದಾರಿ ತಡೆ ಮಾಡುವುದಿಲ್ಲ ಎಂದಿರುವ ರಾಕೇಶ್ ಟಿಕಾಯತ್ ಅವರು, ಪ್ರಮುಖವಾಗಿ ನಮ್ಮ ಎರಡು ಬೇಡಿಕೆಗಳು, ಒಂದು ಬಂಧಿತ ರೈತರನ್ನು ಬಿಡುಗಡೆ ಮಾಡಬೇಕು ಮತ್ತು ಎಂಎಸ್‌ಪಿ ಅಡಿ ಸೂರ್ಯಕಾಂತಿ ಬೀಜಗಳನ್ನು ಖರೀದಿಸಲು ಪ್ರಾರಂಭಿಸಬೇಕು. ಈ ಸಂಬಂಧ ನಾವು ಸರ್ಕಾರದೊಂದಿಗೆ ಚರ್ಚೆಗೆ ಸಿದ್ಧರಿದ್ದೇವೆ" ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


