ದೇಶ

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದುರ್ಮರಣ!

ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸೋಮವಾರ ನಸುಕಿನ ವೇಳೆ ಹೆದ್ದಾರಿಯಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದುರ್ಮರಣ!
ಸಾಂದರ್ಭಿಕ ಚಿತ್ರ
Published On :

ರಾಜಮಹೇಂದ್ರವರಂ: ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸೋಮವಾರ ನಸುಕಿನ ವೇಳೆ ಹೆದ್ದಾರಿಯಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಲ್ಲಚಾರ್ಲ ಗ್ರಾಮದಲ್ಲಿ ಕಾರು ಹೆದ್ದಾರಿಯಿಂದ ಪಲ್ಟಿಯಾಗಿ ರಸ್ತೆಯ ಅಂಚಿನಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪೂರ್ವ ಗೋದಾವರಿ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮೃತಪಟ್ಟ ಆರು ಮಂದಿ ಒಂದೇ ಕುಟುಂಬದವರು. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದವರು ವಿಜಯವಾಡದಿಂದ ರಾಜಮಹೇಂದ್ರವರಂಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.