ದೇಶ

ಜಮ್ಮು ಮತ್ತು ಕಾಶ್ಮೀರ: ಎಲ್ಇಟಿ ಉಗ್ರರ ಸಹಚರನನ್ನು ಬಂಧಿಸಿದ ಭದ್ರತಾ ಪಡೆಗಳು, 2 ಚೀನಾದ ಹ್ಯಾಂಡ್ ಗ್ರೆನೇಡ್‌ ವಶ

ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಡಿಪೋರಾ ಪೊಲೀಸರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ದ ಉಗ್ರರ ಸಹಚರನನ್ನು ಮಂಗಳವಾರ ಬಂಧಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಎಲ್ಇಟಿ ಉಗ್ರರ ಸಹಚರನನ್ನು ಬಂಧಿಸಿದ ಭದ್ರತಾ ಪಡೆಗಳು, 2 ಚೀನಾದ ಹ್ಯಾಂಡ್ ಗ್ರೆನೇಡ್‌ ವಶ
ಜಮ್ಮು ಮತ್ತು ಕಾಶ್ಮೀರ: ಎಲ್ಇಟಿ ಉಗ್ರರ ಸಹಚರನನ್ನು ಬಂಧಿಸಿದ ಭದ್ರತಾ ಪಡೆಗಳು, 2 ಚೀನಾದ ಹ್ಯಾಂಡ್ ಗ್ರೆನೇಡ್‌ ವಶ
Published On :

ಬಂಡಿಪೋರ: ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಡಿಪೋರಾ ಪೊಲೀಸರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ದ ಉಗ್ರರ ಸಹಚರನನ್ನು ಮಂಗಳವಾರ ಬಂಧಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಪ್ರಕಾರ, 13 ರಾಷ್ಟ್ರೀಯ ರೈಫಲ್ಸ್ ಮತ್ತು 45 ಬಿಎನ್ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನೊಂದಿಗೆ ಬಂಡಿಪೋರಾ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಬಹರಾಬಾದ್ ಹಾಜಿನ್‌ನಲ್ಲಿ ಎಲ್‌ಇಟಿಯ ಉಗ್ರರ ಸಹಚರನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಎರಡು ಚೈನೀಸ್ ಗ್ರೆನೇಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಮತ್ತು ಯುಎ(ಪಿ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.