ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜೂನ್ 28 ವರೆಗೆ ಜೈಲು
ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿನಿರ್ದೇಶನಲಾಯ ಬಂಧಿಸಿರುವ ತಮಿಳುನಾಡಿನ ಇಂಧನ, ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಚೆನ್ನೈ ನ ಸ್ಥಳೀಯ ನ್ಯಾಯಾಲಯ ಜೂ.28 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಚೆನ್ನೈ: ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿನಿರ್ದೇಶನಲಾಯ ಬಂಧಿಸಿರುವ ತಮಿಳುನಾಡಿನ ಇಂಧನ, ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಚೆನ್ನೈ ನ ಸ್ಥಳೀಯ ನ್ಯಾಯಾಲಯ ಜೂ.28 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸೆಂಥಿಲ್ ಬಾಲಾಜಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದು, ಸೆಷನ್ಸ್ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಎಸ್ ಅಲ್ಲಿ ಆದೇಶ ಹೊರಡಿಸುವುದಕ್ಕೂ ಮುನ್ನ ಸ್ವತಃ ಆಸ್ಪತ್ರೆಗೆ ಆಗಮಿಸಿದ್ದರು.
ಬುಧವಾರದಂದು ಬೆಳಿಗ್ಗೆ 1.30 ಕ್ಕೆ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದರು. ಸಚಿವರನ್ನೊಳಗೊಂಡು ನಡೆದಿದ್ದ ಉದ್ಯೋಗಕ್ಕಾಗಿ ಹಣದ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಕೆಲವು ತಿಂಗಳ ಹಿಂದೆ ಅನುಮತಿ ನೀಡಿತ್ತು.
ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳು ನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಸರ್ಜರಿ ಸಲಹೆ ನೀಡಿದ ವೈದ್ಯರು!
ಜಾರಿ ನಿರ್ದೇಶನಾಲಯದಿಂದ ಕ್ರಮ ಎದುರಿಸಿದ ಸಿಎಂ ಎಂಕೆ ಸ್ಟ್ಯಾಲಿನ್ ಅವರ ಸಂಪುಟದ ಮೊದಲ ಸಚಿವರು ಬಾಲಾಜಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


