ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಸ್ಪರ್ಧೆ ಖಚಿತ: ತೆಲುಗು ನಟ ಪವನ್ ಕಲ್ಯಾಣ್
2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಅಮರಾವತಿ: 2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.
ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ‘ಜನ ಸೇನಾ‘ ಪಕ್ಷವು ಸ್ಪರ್ಧಿಸಲಿದೆ ಎಂದು ಜನ ಸೇನಾ ಸಂಸ್ಥಾಪಕ ಹಾಗೂ ತೆಲುಗು ನಟ ಪವನ್ ಕಲ್ಯಾಣ್ ಘೋಷಿಸಿದ್ದು, ಪೂರ್ವ ಗೋದಾವರಿ ಜಿಲ್ಲೆಯ ಕತಿಪುಡಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ಜನ ಸೇನಾ‘ ಪಕ್ಷವು ವಿಧಾನಸಭೆಯನ್ನು ಪ್ರವೇಶಿಸಲಿದ್ದು, ಹೆಜ್ಜೆ ಗುರುತುಗಳನ್ನು ಮೂಡಿಸಲಿದೆ. ಸಾಧ್ಯವಾದಷ್ಟು ಜನರ ಪರವಾಗಿ ನಿಲುತ್ತೇವೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ಇದನ್ನೂ ಓದಿ: ಎಂದಿಗೂ ರಾಜಕೀಯ ಸೇರಲ್ಲ: ಬಾಲಿವುಡ್ ನಟ ಮನೋಜ್ ಬಾಜಪೇಯಿ
ವಿಶೇಷವಾಗಿ ವಿನ್ಯಾಸಗೊಳಿಸಿದ ವಾಹನದ ಮೂಲಕ ಚುನಾವಣಾ ಯಾತ್ರೆ ‘ವಾರಾಹಿ‘ಯನ್ನು ಆರಂಭಿಸಲಾಗಿದೆ. ಅನ್ನವರಂನಿಂದ ಆರಂಭವಾಗಿರುವ ಜನಸೇನಾ ಯಾತ್ರೆಯು ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿ ಅಂತ್ಯಗೊಳ್ಳಲಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಸೋತ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಭೀಮಾವರಂ ಕೂಡ ಒಂದಾಗಿದೆ. ಆದರೆ ಷಡ್ಯಂತ್ರದಿಂದ ಚುನಾವಣೆಯಲ್ಲಿ ಸೋತಿದ್ದೇನೆ ಎಂದು ಕಲ್ಯಾಣ್ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ವೈ. ಎಸ್ ಜಗನ್ ಮೋಹನ್ ರೆಡ್ಡಿ ಸರಿಯಾದ ರೀತಿಯಲ್ಲಿ ಆಡಳಿತ ನಡೆಸಲಿ, ಇಲ್ಲದಿದ್ದರೆ ಮುಂದೊಂದು ದಿನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ನೆಲದ ಮೇಲೆ ಕೂರುವಂತೆ ಮಾಡುವುದಾಗಿ ಕಲ್ಯಾಣ್ ಹೇಳಿದ್ದಾರೆ.
2019ರ ಚುನಾವಣೆಯಲ್ಲಿ ರಾಪಾಕ ವರಪ್ರಸಾದ್ ಎಂಬುವವರ ಮೂಲಕ ‘ಜನ ಸೇನಾ‘ ಕೇವಲ ಒಂದು ವಿಧಾನಸಭಾ ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


