ದೇಶ

ಮಧ್ಯಪ್ರದೇಶ: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್! ಸಿಂಧಿಯಾ ಆಪ್ತ ಕಾಂಗ್ರೆಸ್ ಸೇರ್ಪಡೆ

ಕರ್ನಾಟಕ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ ಇದೀಗ ಮಧ್ಯಪ್ರದೇಶದತ್ತ ತನ್ನ ಚಿತ್ತ ಹರಿಸಿದೆ. ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದೆ.

ಮಧ್ಯಪ್ರದೇಶ: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್! ಸಿಂಧಿಯಾ ಆಪ್ತ ಕಾಂಗ್ರೆಸ್ ಸೇರ್ಪಡೆ
ಬೈಜನಾಥ್ ಸಿಂಗ್ ಯಾದವ್ ಕಾಂಗ್ರೆಸ್ ಸೇರ್ಪಡೆ
Published On :

ಭೋಪಾಲ್: ಕರ್ನಾಟಕ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ ಇದೀಗ ಮಧ್ಯಪ್ರದೇಶದತ್ತ ತನ್ನ ಚಿತ್ತ ಹರಿಸಿದೆ. ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದೆ.

ಮಧ್ಯಪ್ರದೇಶ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೇಂದ್ರ ಸಚಿವ ಜ್ಯೋತಿಯಾಧಿತ್ಯ ಸಿಂಧಿಯಾ ಅವರ ಆಪ್ತ ಬೈಜನಾಥ್ ಸಿಂಗ್ ಯಾದವ್ ಕೇಸರಿ ಪಕ್ಷ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.  ಶಿವಪುರಿ ಮೂಲದ ಯಾದವ್ ಮತ್ತು 15 ಜನಪದ ಸದಸ್ಯರು ಸೇರಿದಂತೆ ಅವರ ಬೆಂಬಲಿಗರನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಕಮಲ್ ನಾಥ್ ಪಕ್ಷಕ್ಕೆ ಬರಮಾಡಿಕೊಂಡರು.

ಯಾದವ್  ಸಿಂಧಿಯಾ ಅವರೊಂದಿಗೆ  2020 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.  ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಆದ್ದರಿಂದ ಯಾದವ್ ತಮ್ಮ ಮಾತೃ ಪಕ್ಷಕ್ಕೆ ಮರಳಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸುದ್ದಿಗಾರರಿಗೆ ತಿಳಿಸಿದರು.

ಆಡಳಿತಾರೂಢ ಬಿಜೆಪಿ ಸರ್ಕಾರದಲ್ಲಿನ ವ್ಯಾಪಕ ಭ್ರಷ್ಟಾಚಾರದಿಂದ ಅಸಂತೋಷಗೊಂಡಿರುವ ಹಲವಾರು ಕಾರ್ಯಕರ್ತರು ಮತ್ತು ನಾಯಕರು ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ಮತ್ತಿತರ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ. ಅಷ್ಟೇ ಅಲ್ಲ, ಸಿಂಧಿಯಾ ಜೊತೆಗೆ ಬಿಜೆಪಿ ಸೇರಿದ ಬಹುತೇಕ ಕಾಂಗ್ರೆಸ್ ನಾಯಕರು ಕೂಡ ತಮ್ಮ ಮಾತೃಪಕ್ಷಕ್ಕೆ ಮರಳುತ್ತಾರೆ. ಸಿಂಧಿಯಾ ಮಾತ್ರ ಬಿಜೆಪಿಯಲ್ಲಿ ಉಳಿಯುವ ದಿನ ಬರುತ್ತದೆ. ಎಂದು ಅರುಣ್ ಯಾದವ್ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.