ಮಧ್ಯ ಪ್ರದೇಶ: ಪ್ರೀತಿಸಿದವಳ ಕೈಹಿಡಿಯಲು ಹಿಂದೂ ಧರ್ಮ ಸ್ವೀಕರಿಸಿದ ಮುಸ್ಲಿಂ ಯುವಕ!
ಪ್ರೀತಿಸಿದವಳ ಕೈಹಿಡಿಯುವ ಸಲುವಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮ ಸ್ವೀಕರಿಸಿದ ಘಟನೆ ಮಧ್ಯಪ್ರದೇಶದ ನರಸಿಂಗ್ಪುರ ಎಂಬಲ್ಲಿ ನಡೆದಿದೆ.

ನರಸಿಂಗ್ಪುರ: ಪ್ರೀತಿಸಿದವಳ ಕೈಹಿಡಿಯುವ ಸಲುವಾಗಿ ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮ ಸ್ವೀಕರಿಸಿದ ಘಟನೆ ಮಧ್ಯಪ್ರದೇಶದ ನರಸಿಂಗ್ಪುರ ಎಂಬಲ್ಲಿ ನಡೆದಿದೆ.
ಮೂಲತಃ ನರಸಿಂಗ್ಪುರ ನಿವಾಸಿಯಾಗಿರುವ ಫಾಜಿಲ್ ಖಾನ್ ತನ್ನ ಗೆಳತಿ ಸೋನಾಲಿ ಎಂಬಾಕೆಯನ್ನು ಬಹು ವರ್ಷಗಳಿಂದ ಪ್ರೀತಿಸುತ್ತಿದ್ದ. ಇದರಂತೆ ಪ್ರೀತಿದಾಕೆಯನ್ನು ವಿವಾಹವಾಗಲು ಬಯಸಿದ್ದ ಯುವಕ ಗುರುವಾರ ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾನೆ. ಈ ವೇಳೆ ತನ್ನ ಹೆಸರನ್ನು ಅಮನ್ ರೈ ಎಂದು ಬದಲಿಸಿಕೊಂಡಿದ್ದಾನೆ.
ಕರೇಲಿರಾಮ್ ದೇವಾಲಯದಲ್ಲಿ ಸೋನಾಲಿ ಹಾಗೂ ಅಮನ್ ರೈ ವಿವಾಹವು ನೆರವೇರಿದ್ದು, ಮದುವೆಗೆ ಎರಡು ಮನೆಯವರು ಸಾಕ್ಷಿಯಾಗಿದ್ದಾರೆ.
ದಂಪತಿಗಳು ಇದೀಗ ವಿವಾಹ ನೋಂದಣಿಗೆ ಅರ್ಜಿಯನ್ನು ಕೂಡ ಸಲ್ಲಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ ಅಮನ್ ತಂದೆ ಮೊದಲು ಹಿಂದೂ ಆಗಿದ್ದರು ಎಂಬುದು. ಅಮನ್ ಅವರ ತಾಯಿ ಮುಸ್ಲಿಂ ಆಗಿದ್ದು, ಹಲವು ವರ್ಷಗಳ ಹಿಂದೆ ಹಿಂದೂ ಧರ್ಮವನ್ನು ತೊಡೆದು ಇಸ್ಲಾಂಗೆ ಮತಾಂತರಗೊಂಡು ವಿವಾಹವಾಗಿದ್ದರು.
ಈ ಬಗ್ಗೆ ಮಾತನಾಡಿರುವ ಅಮನ್, ನನ್ನ ತಂದೆ ನನ್ನ ತಾಯಿಗಾಗಿ ಧರ್ಮವನ್ನು ಬದಲಾಯಿಸಿದ್ದರು. ನಾನು ನನ್ನ ಹೆಂಡತಿಗಾಗಿ ನನ್ನ ಧರ್ಮವನ್ನು ಬದಲಾಯಿಸಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


